ಜೈಪುರ: ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಗಳು ನಡೆಯುತ್ತಿರುವುದನ್ನು ನಾವು ಗಮನಿಸಿದ್ದೇವೆ. ಭಾರತದ ಪ್ರತಿ ಭಾಷೆಯಲ್ಲೂ ಭಾರತೀಯ ಸಂಸ್ಕೃತಿಯ ಪ್ರತಿಬಿಂಬವನ್ನು ಬಿಜೆಪಿ ನೋಡುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.
ಜೈಪುರದಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು.
‘ಕಳೆದ ಕೆಲವು ದಿನಗಳಿಂದ ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಗಳು ನಡೆಯುತ್ತಿರುವುದನ್ನು ನಾವು ಗಮನಿಸಿದ್ದೇವೆ. ಬಿಜೆಪಿಯು ಪ್ರತಿಯೊಂದು ಪ್ರಾದೇಶಿಕ ಭಾಷೆಯಲ್ಲೂ ಭಾರತೀಯ ಸಂಸ್ಕೃತಿಯ ಪ್ರತಿಬಿಂಬವನ್ನು ಕಾಣುತ್ತದೆ. ಅವುಗಳನ್ನು ಪೂಜನೀಯವಾಗಿ ಪರಿಗಣಿಸುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರತಿಯೊಂದು ಪ್ರಾದೇಶಿಕ ಭಾಷೆಗೂ ಪ್ರಾಮುಖ್ಯತೆ ನೀಡಲಾಗಿದೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.