ಪಟ್ನಾ: ಚುನಾವಣಾ ಲಾಭಕ್ಕಾಗಿ ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ದಾಳಿ ನಡೆಯುತ್ತಿದೆ ಎಂಬ ವದಂತಿಗಳನ್ನು ಬಿಜೆಪಿ ಹರಡುತ್ತಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ಆರೋಪಿಸಿದ್ದಾರೆ
ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಮಾತನಾಡಿ, ‘ತಮಿಳುನಾಡಿನಲ್ಲಿ ಏನೂ ಆಗಿಲ್ಲ ಎಂದು ತಿಳಿದು ಬಂದಿದೆ. ವದಂತಿಗಳನ್ನು ಹರಡಿದ್ದಕ್ಕಾಗಿ ಪ್ರಕರಣ ದಾಖಲಿಸಿರುವ ಮತ್ತು ಬಂಧಿಸಲಾದ ಜನರನ್ನು ನೋಡಿ’ ಎಂದು ದಕ್ಷಿಣ ರಾಜ್ಯದಲ್ಲಿ ಡಿಎಂಕೆ ಸರ್ಕಾರ ಹಲವಾರು ಬಿಜೆಪಿ ನಾಯಕರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಉಲ್ಲೇಖಿಸಿದರು.
ಚುನಾವಣಾ ಲಾಭಕ್ಕಾಗಿ ವದಂತಿಗಳನ್ನು ಹರಡಲಾಗುತ್ತಿದೆ. ಆದರೆ, ಅದು ತಪ್ಪು. ದೇಶದ ಜನರು ಈಗ ಏನು ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳುವಷ್ಟು ಜಾಗೃತರಾಗಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.