ADVERTISEMENT

Assam LS polls: ಬಿಜೆಪಿ 11, ಮಿತ್ರ ಪಕ್ಷಗಳಿಗೆ 3 ಸ್ಥಾನ– ಸಿ.ಎಂ ಹಿಮಂತ ಬಿಸ್ವಾ

ಪಿಟಿಐ
Published 29 ಫೆಬ್ರುವರಿ 2024, 14:22 IST
Last Updated 29 ಫೆಬ್ರುವರಿ 2024, 14:22 IST
<div class="paragraphs"><p> ಪ್ರಧಾನಿ ನರೇಂದ್ರ ಮೋದಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾತುಕತೆ ನಡೆಸಿದರು –ಪಿಟಿಐ ಚಿತ್ರ</p></div>

ಪ್ರಧಾನಿ ನರೇಂದ್ರ ಮೋದಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾತುಕತೆ ನಡೆಸಿದರು –ಪಿಟಿಐ ಚಿತ್ರ

   

ಗುವಾಹಟಿ: ಮುಂಬರುವ ಲೋಕಸಭಾ ಚುನಾವಣೆಗೆ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ 11 ಸ್ಥಾನ, ಮಿತ್ರಪಕ್ಷಗಳು ಮೂರು ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿವೆ.

ಈ ಬಗ್ಗೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಮಾಹಿತಿ ನೀಡಿದ್ದಾರೆ.

ADVERTISEMENT

ಬಿಜೆಪಿ 11 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದ್ದು ಮಿತ್ರ ಪಕ್ಷಗಳಾ ಎಜಿಪಿ (ಅಸ್ಸಾಂ ಗಣ ಪರಿಷತ್‌) ಎರಡು ಸ್ಥಾನಗಳಲ್ಲಿ ಹಾಗೂ ಯುಪಿಪಿಎಲ್ ಒಂದು ಸ್ಥಾನದಲ್ಲಿ ಸ್ಪರ್ಧೆ ಮಾಡಲಿವೆ. ಬಾರ್ಪೇಟಾ ಮತ್ತು ಧುಬ್ರಿ ಲೋಕಸಭೆ ಕ್ಷೇತ್ರಗಳಲ್ಲಿ ಎಜಿಪಿ ಸ್ಪರ್ಧಿಸಲಿದ್ದು, ಯುಪಿಪಿಎಲ್ ಕೋಕ್ರಝಾರ್‌ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ಅವರು ಮಾಹಿತಿ ನೀಡಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಚಿವ ಅಮಿತ್ ಶಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂತೋಷ್‌ ಅವರನ್ನು ಭೇಟಿಯಾಗಿ ಸೀಟು ಹಂಚಿಕೆ ಕುರಿತು ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗಿದೆ ಎಂದು ಹಿಮಂತ ಬಿಸ್ವಾ ಹೇಳಿದರು.

ಎಜಿಪಿ ಹೆಚ್ಚಿನ ಸ್ಥಾನಗಳಿಗೆ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ನಾಯಕರು ಅವರ ಮನವಿಗೆ ಒಪ್ಪದೇ ಎರಡು ಸ್ಥಾನಗಳಿಗೆ ಸಮ್ಮತಿ ನೀಡಿದರು. ಇದಕ್ಕೆ ಎಜಿಪಿ ಮುಖಂಡರು ಸಹ ಒಪ್ಪಿದ್ದಾರೆ ಎಂದು ಹಿಮಂತ ಬಿಸ್ವಾ ಹೇಳಿದರು. 

ಅಸ್ಸಾಂನಲ್ಲಿ ನಾವು 11 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಹಿಮಂತ ಬಿಸ್ವಾ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಸ್ಸಾಂ ಬಿಜೆಪಿ ಅಧ್ಯಕ್ಷ ಬಬೇಶ್‌ ಕಾಲಿತ್‌ ಕೂಡ ಇದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ 14 ಸ್ಥಾನಗಳ ಪೈಕಿ ಬಿಜೆಪಿ 9, ಕಾಂಗ್ರೆಸ್‌ 3, ಇತರರು 2 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.