ADVERTISEMENT

ದೇಶ ವಿಭಜಿಸಲು ಬಿಜೆಪಿ ಯತ್ನ: ಲಾಲು ಪ್ರಸಾದ್‌

ಪಿಟಿಐ
Published 25 ಫೆಬ್ರುವರಿ 2023, 11:39 IST
Last Updated 25 ಫೆಬ್ರುವರಿ 2023, 11:39 IST
ಲಾಲು ಪ್ರಸಾದ್
ಲಾಲು ಪ್ರಸಾದ್   

ಪುರ್ನಿಯಾ (ಬಿಹಾರ): ‘ಬಿಜೆಪಿಯು ಜಾತಿ ಹಾಗೂ ಧಾರ್ಮಿಕ ಮಾರ್ಗಗಳ ಮೂಲಕ ದೇಶವನ್ನು ವಿಭಜಿಸಲು ಯತ್ನಿಸುತ್ತಿದೆ’ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಶನಿವಾರ ಆರೋಪಿಸಿದ್ದಾರೆ.

ಜೆಡಿಯು ಮತ್ತು ಆರ್‌ಜೆಡಿ ಮೈತ್ರಿಕೂಟದ ರ‍್ಯಾಲಿಯಲ್ಲಿ ವರ್ಚುವಲ್‌ ಆಗಿ ಮಾತನಾಡಿದ ಅವರು, ‘ಬಿಜೆಪಿ ಮತ್ತು ಆರ್‌ಎಸ್ಎಸ್‌ ದೇಶದ ಅಲ್ಪಸಂಖ್ಯಾತರ ಮತ್ತು ದುರ್ಬಲ ವರ್ಗದವರ ವಿರುದ್ಧವಿದೆ’ ಎಂದಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ದೇಶದ ಅಲ್ಪಸಂಖ್ಯಾತರು ಮತ್ತು ದುರ್ಬಲ ವಿರುದ್ಧ ಇವೆ. ಈ ಕಾರಣ 2024ರ ಲೋಕಸಭಾ ಚುನಾವಣೆ ಹಾಗೂ 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಕಿತ್ತೊಗೆಯಬೇಕು ಎಂದು ಹೇಳಿದರು.

ADVERTISEMENT

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮೀಸಲಾತಿ ವಿರುದ್ಧ ಇವೆ ಹಾಗೂ ಸಂವಿಧಾನವನ್ನು ಬದಲಾಯಿಸುವ ಪ್ರಯತ್ನ ಮಾಡುತ್ತಿವೆ. ಈ ಮೂಲಕ ಮೀಸಲಾತಿಯನ್ನು ರದ್ದು ಮಾಡುತ್ತವೆ ಎಂದು ಲಾಲು ಪ್ರಸಾದ್‌ ಯಾದವ್‌ ಆರೋಪಿಸಿದರು.

ನಾವು ಆರ್‌ಎಸ್‌ಎಸ್‌ ಸಿದ್ಧಾಂತದ ವಿರುದ್ಧ ಹೋರಾಟ ಮಾಡಬೇಕಿದೆ. ಬಿಜೆಪಿ ಪಕ್ಷ ಆರ್‌ಎಸ್‌ಎಸ್‌ ಸೂಚನೆಗಳನ್ನು ಪಾಲನೆ ಮಾಡುತ್ತಿದೆ. ಈ ಕಾರಣಕ್ಕೆ ಬಿಜೆಪಿಯನ್ನು ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಸೋಲಿಸಬೇಕು ಎಂದು ಲಾಲು ಪ್ರಸಾದ್‌ ಯಾದವ್‌ ಕರೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.