ADVERTISEMENT

ಜಮ್ಮು–ಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್

ಪಿಟಿಐ
Published 4 ಅಕ್ಟೋಬರ್ 2024, 9:26 IST
Last Updated 4 ಅಕ್ಟೋಬರ್ 2024, 9:26 IST
ಶಿವರಾಜ್‌ ಸಿಂಗ್‌ ಚೌಹಾಣ್
ಶಿವರಾಜ್‌ ಸಿಂಗ್‌ ಚೌಹಾಣ್   

ಭೋಪಾಲ್‌: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಭರವಸೆ ವ್ಯಕ್ತಪಡಿಸಿದರು.

ಜಾರ್ಖಂಡ್‌ನ ಭೋಪಾಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ತನ್ನ ಸರ್ಕಾರ ರಚಿಸುತ್ತದೆ ಎಂಬ ಸಂಪೂರ್ಣ ವಿಶ್ವಾಸವಿದೆ. ಅಲ್ಲದೆ, ಹರಿಯಾಣದಲ್ಲೂ ಉತ್ತಮ ಸನ್ನಿವೇಶವಿದ್ದು, ಚುನಾವಣೆಯ ಬಳಿಕ ಅಲ್ಲಿಯೂ ಪಕ್ಷ ಆಡಳಿತದ ಚುಕ್ಕಾಣಿ ಹಿಡಿಯಲಿದೆ‘ ಎಂದು ಹೇಳಿದರು.

‘ಜಾರ್ಖಂಡ್‌ನಲ್ಲಿ ಚುನಾವಣೆ ಘೋಷಣೆಯಾಗಿಲ್ಲ. ರಾಜ್ಯದಲ್ಲಿ ಬಿಜೆಪಿಯ ‘ಪರಿವರ್ತನಾ ಯಾತ್ರೆ’ಗೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ’ ಎಂದು ಅವರು ತಿಳಿಸಿದರು.

ADVERTISEMENT

90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರದ ಚುನಾವಣೆಯು ಸೆಪ್ಟೆಂಬರ್‌ 18, 25 ಮತ್ತು ಅಕ್ಟೋಬರ್‌ 1ರಂದು ಮೂರು ಹಂತಗಳಲ್ಲಿ ನಡೆಯಿತು. ಹರಿಯಾಣ ವಿಧಾನಸಭೆ ಚುನಾವಣೆಯು ಅಕ್ಟೋಬರ್‌ 5ರಂದು ನಡೆಯಲಿದೆ. ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶವು ಅಕ್ಟೋಬರ್‌ 8ರಂದು ಹೊರ ಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.