ADVERTISEMENT

ಉತ್ತರ ಪ್ರದೇಶದಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ: ಕೇಶವ ಪ್ರಸಾದ್ ಮೌರ್ಯ

ಐಎಎನ್ಎಸ್
Published 23 ಜನವರಿ 2022, 9:35 IST
Last Updated 23 ಜನವರಿ 2022, 9:35 IST
ಸಿಎಂ ಯೋಗಿ ಆದಿತ್ಯನಾಥ್ ಜತೆ ಬಿಜೆಪಿ ನಾಯಕ ಕೇಶವ ಪ್ರಸಾದ್ ಮೌರ್ಯ
ಸಿಎಂ ಯೋಗಿ ಆದಿತ್ಯನಾಥ್ ಜತೆ ಬಿಜೆಪಿ ನಾಯಕ ಕೇಶವ ಪ್ರಸಾದ್ ಮೌರ್ಯ   

ಲಖನೌ: ವಿಧಾನಸಭಾ ಚುನಾವಣಾ ಕಾವು ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರ ನಡುವೆ ವಾಕ್ಸಮರಕ್ಕೂ ದಾರಿ ಮಾಡಿಕೊಟ್ಟಿದೆ.

ಉತ್ತರ ಪ್ರದೇಶದಲ್ಲಿ ಕಳೆದ ಬಾರಿಯ ಫಲಿತಾಂಶಕ್ಕೆ ಹೋಲಿಸಿದರೆ, ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಗೆದ್ದು, ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ನಾಯಕ ಕೇಶವ ಪ್ರಸಾದ್ ಮೌರ್ಯ ಹೇಳಿದ್ದಾರೆ.

ಸುದ್ದಿಸಂಸ್ಥೆ ಐಎಎನ್‌ಎಸ್ ಜತೆ ಮಾತನಾಡಿರುವ ಅವರು, ಬಿಜೆಪಿ ಚುನಾವಣೆಗೆ ಸದಾ ಸಿದ್ಧವಾಗಿರುತ್ತದೆ. ಮಾರ್ಚ್ 10 ರಂದು ಫಲಿತಾಂಶ ಬಂದ ಬಳಿಕ ಸಮಾಜವಾದಿ ಪಾರ್ಟಿ, ಬಹುಜನ ಸಮಾಜವಾದಿ ಪಾರ್ಟಿ ಮತ್ತು ಕಾಂಗ್ರೆಸ್ ಕಣ್ಮರೆಯಾಗಲಿವೆ ಎಂದಿದ್ದಾರೆ.

ADVERTISEMENT

ವಿಧಾನಸಭಾ ಚುನಾವಣೆಯ ಬಳಿಕ ಪಕ್ಷ 2024ರ ಲೋಕಸಭಾ ಚುನಾವಣೆಗೆ ಸಜ್ಜಾಗಲಿದೆ. ಸೂಕ್ತ ತಯಾರಿಯನ್ನು ಬಿಜೆಪಿ ಆರಂಭಿಸಲಿದೆ ಎಂದು ಅವರು ಹೇಳಿದ್ದಾರೆ.

ವಿಕಪ್ಷಗಳು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಪ್ರತ್ಯಕ್ಷವಾಗುತ್ತವೆ ಮತ್ತು ಅಧಿಕಾರಕ್ಕಾಗಿ ಕಾಯುತ್ತಿರುತ್ತವೆ ಎಂದು ಮೌರ್ಯ ಅವರು ಟೀಕಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್‌ 7ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್‌ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.