ನವದೆಹಲಿ: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) 10 ಮತ್ತು ಆಮ್ ಆದ್ಮಿ ಪಕ್ಷವು (ಎಎಪಿ) 6 ಸ್ಥಾನಗಳಲ್ಲಿ ಜಯ ಗಳಿಸಿದೆ.
ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿತು.
43 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.
ಎಂಸಿಡಿಯಲ್ಲಿ 15 ವರ್ಷಗಳ ಕಾಲ ಆಡಳಿತ ನಡೆಸಿದ್ದ ಬಿಜೆಪಿಗೆ ಎಎಪಿ ಸಮಬಲದ ಸ್ಪರ್ಧೆ ಒಡ್ಡುತ್ತಿದೆ. ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್‌ಗಳಿಗೆ ಡಿಸೆಂಬರ್ 4, ಭಾನುವಾರದಂದು ಮತದಾನ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.