ADVERTISEMENT

ಮೋದಿ, ಅಡ್ವಾಣಿ ವಿರುದ್ದ ಅವಹೇಳನ: ಪತ್ರಕರ್ತ ನಿಖಿಲ್ ಕಾರಿನ ಮೇಲೆ ದಾಳಿ, ಪ್ರಕರಣ

ಪಿಟಿಐ
Published 10 ಫೆಬ್ರುವರಿ 2024, 11:49 IST
Last Updated 10 ಫೆಬ್ರುವರಿ 2024, 11:49 IST
<div class="paragraphs"><p>ನಿಖಿಲ್ ವಾಗ್ಲೆ ಅವರ ಕಾರಿನ ಮೇಲೆ ದಾಳಿ ನಡೆಸಿದ  ಬಿಜೆಪಿ ಕಾರ್ಯಕರ್ತರು</p></div>

ನಿಖಿಲ್ ವಾಗ್ಲೆ ಅವರ ಕಾರಿನ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು

   

ಪುಣೆ: ಪತ್ರಕರ್ತ ನಿಖಿಲ್‌ ವಾಗ್ಳೆ ಅವರ ಕಾರಿನ ಮೇಲೆ ದಾಳಿ ನಡೆಸಿದ ಬಿಜೆಪಿಯ ಕೆಲವು ಕಾರ್ಯಕರ್ತರ ಮೇಲೆ ಪುಣೆ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದಾರೆ. 

ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ, ಪಾರ್ವತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಬಿಜೆಪಿಯ ಕೆಲವು ಕಾರ್ಯಕರ್ತರು ವಾಗ್ಳೆ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿ, ಕಾರಿನಲ್ಲಿದ್ದವರನ್ನು ಗಾಯಗೊಳಿಸಿದರು. ಆಗ ದೂರುದಾರರು ಮತ್ತು ಕೆಲವರು ವಾಗ್ಳೆ ಅವರ ಕಾರನ್ನು ರಕ್ಷಿಸಿಸಿದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. 

ಹಾಗೆಯೇ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 144 ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ನಿಖಿಲ್‌ ವಾಗ್ಳೆ ಮತ್ತು ಬಿಜೆಪಿ, ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್‌ನ ನಗರ ಘಟಕಗಳ ಅಧ್ಯಕ್ಷರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

‘ಪೊಲೀಸರ ಅನುಮತಿಯಿಲ್ಲದೆ ಕಾರ್ಯಕ್ರಮ ನಡೆಸಿದ್ದರಿಂದ ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ’ ಎಂದು ಉಪ ಪೊಲೀಸ್ ಆಯುಕ್ತ ಸಂಭಾಜಿ ಕದಂ ತಿಳಿಸಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ಮತ್ತು ಅಡ್ವಾಣಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ವಾಗ್ಳೆ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.