ಗಾಜಿಯಾಬಾದ್: ದೊಡ್ಡ, ಕಾರ್ಪೊರೇಟ್ ಸ್ನೇಹಿತರಿಗಾಗಿ ಬಿಜೆಪಿ ನೆರವು ಮಾಡುತ್ತಿದ್ದು, ಬಡವರು ಮತ್ತು ಸಣ್ಣ ವ್ಯಾಪಾರಿಗಳ ಬಗ್ಗೆ ಚಿಂತೆ ಮಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಆರೋಪಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮನೆ-ಮನೆ ಪ್ರಚಾರದಲ್ಲಿ ಭಾಗಿಯಾದ ಪ್ರಿಯಾಂಕಾ ಈ ಬಾರಿ ಉತ್ತರ ಪ್ರದೇಶದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂದು ಹೇಳಿದ್ದಾರೆ.
'ನಾವು ಎಲ್ಲೇ ಪ್ರಚಾರ ಮಾಡಿದರೂ ಜನರು ಅತ್ಯುತ್ಸಾಹದಿಂದ ಭಾಗವಹಿಸುತ್ತಾರೆ. ಈ ಸಂಭ್ರಮ ಉತ್ತರ ಪ್ರದೇಶದಲ್ಲಿ ರಾಜಕೀಯ ಬದಲಾವಣೆಯ ಅಲೆಯಾಗಿ ಬದಲಾಗಲಿದೆ' ಎಂಬ ಭರವಸೆ ನನಗಿದೆ ಎಂದು ಹೇಳಿದರು.
'ನೋಟು ರದ್ಧತಿ, ಲೌಕ್‌ಡೌನ್ ಸಮಯದಲ್ಲಿ ಜನರಿಗೆ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಸರ್ಕಾರ ತನ್ನ ದೊಡ್ಡ ಕಾರ್ಪೊರೇಟ್ ಸ್ನೇಹಿತರಿಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಸಣ್ಣ ವ್ಯಾಪಾರಿಗಳು, ಬಡವರು ಹಾಗೂ ಇತರರಿಗೆ ಯಾವುದೇ ಸ್ಥಾನವಿಲ್ಲ' ಎಂದು ವಾಗ್ದಾಳಿ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.