ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ | ಬಿಜೆಪಿ ಭ್ರಷ್ಟಾಚಾರದಿಂದ ದೇಶ ದುರ್ಬಲ: ಪ್ರಿಯಾಂಕಾ

ಪಿಟಿಐ
Published 22 ಜೂನ್ 2024, 2:35 IST
Last Updated 22 ಜೂನ್ 2024, 2:35 IST
<div class="paragraphs"><p>ಪ್ರಿಯಾಂಕಾ ಗಾಂಧಿ ವಾದ್ರಾ</p></div>

ಪ್ರಿಯಾಂಕಾ ಗಾಂಧಿ ವಾದ್ರಾ

   

ಪಿಟಿಐ ಚಿತ್ರ

ನವದೆಹಲಿ: ಬಿಜೆಪಿ ಆಡಳಿತದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯು ರಾಷ್ಟ್ರೀಯ ಸಮಸ್ಯೆಯಾಗಿ ಮಾರ್ಪಟ್ಟಿದೆ ಮತ್ತು ದೇಶದ ಕೋಟ್ಯಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ನೀಟ್‌ ಹಗರಣ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸುತ್ತದೆ. ಇದರಿಂದಾಗಿ 24 ಲಕ್ಷ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಲಿದೆ’ ಎಂದು ಹೇಳಿದ್ದಾರೆ.

‘ಕಳೆದ ಐದು ವರ್ಷಗಳಲ್ಲಿ. ದೇಶದಲ್ಲಿ 43 ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ. ಬಿಜೆಪಿ ಆಡಳಿತದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯು ರಾಷ್ಟ್ರೀಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಇದು ಕೋಟ್ಯಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ. ದೇಶವು ಅತಿ ಹೆಚ್ಚು ಯುವಜನತೆಯನ್ನು ಹೊಂದಿದೆ. ಈ ಯುವಜನರನ್ನು ಕೌಶಲ್ಯ ಮತ್ತು ಸಮರ್ಥರನ್ನಾಗಿ ಮಾಡುವ ಬದಲು ಬಿಜೆಪಿ ಸರ್ಕಾರ ಅವರನ್ನು ದುರ್ಬಲಗೊಳಿಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಟ್ಯಂತರ ಪ್ರತಿಭಾವಂತ ವಿದ್ಯಾರ್ಥಿಗಳು ಹಗಲಿರುಳು ಶ್ರಮವಹಿಸಿ ಅಧ್ಯಯನ ಮಾಡುತ್ತಾರೆ. ವಿವಿಧ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ವರ್ಷಗಟ್ಟಲೆ ಖಾಲಿ ಹುದ್ದೆಗಳ ನೇಮಕಾತಿ ಆದೇಶಕ್ಕಾಗಿ ಕಾಯುತ್ತಾರೆ. ಬಳಿಕೆ ಹುದ್ದೆಗಾಗಿ ಅರ್ಜಿ ತುಂಬುವ ಖರ್ಚು, ಪರೀಕ್ಷೆಗೆ ಹೋಗುವ ಖರ್ಚು. ಆದರೆ, ಕೊನೆಗೆ ಭ್ರಷ್ಟಚಾರದಿಂದ ವಿದ್ಯಾರ್ಥಿಗಳ ಇಡೀ ಶ್ರಮ ವ್ಯರ್ಥವಾಗುತ್ತದೆ. ಬಿಜೆಪಿಯ ಭ್ರಷ್ಟಾಚಾರದಿಂದ ದೇಶ ದುರ್ಬಲಗೊಳ್ಳುತ್ತಿದೆ ಎಂದು ಪ್ರಿಯಾಂಕಾ ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.