ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ನಂದಿಗ್ರಾಮದಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ 'ಅಪರಾಧಿಗಳಿಗೆ ಆಶ್ರಯ ನೀಡಿದ್ದಾರೆ' ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಹೊರಗಿನ ಹೈ-ಪ್ರೊಫೈಲ್ ವ್ಯಕ್ತಿಗಳು ಅಲ್ಲಿ ನಾಲ್ಕು ಸ್ಥಳಗಳಲ್ಲಿ ತಂಗಿದ್ದಾರೆ. ಸುವೇಂದು ಅಧಿಕಾರಿಯು ಈ ಸ್ಥಳಗಳಲ್ಲಿ ಒಂದಕ್ಕೆ ಭೇಟಿ ನೀಡಿದ್ದಾರೆ ಎಂದು ಆಡಳಿತಾರೂಢ ಪಕ್ಷವು ಆರೋಪಿಸಿದೆ.
'ನಂದಿಗ್ರಾಮದಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿರುವ ಅಭ್ಯರ್ಥಿ ಸುವೇಂದು ಅಧಿಕಾರಿಯು ನಂದಿಗ್ರಾಮದ ನಿವಾಸಿಗಳಲ್ಲದ ಅಪರಾಧಿಗಳಿಗೆ ಆಶ್ರಯ ನೀಡುತ್ತಿದ್ದಾರೆ ಎಂಬುದು ನಮ್ಮ ಅರಿವಿಗೆ ಬಂದಿದೆ' ಎಂದು ಮಾ. 22 ರ ಪತ್ರದಲ್ಲಿ ತಿಳಿಸಲಾಗಿದೆ.
ಸ್ಥಳೀಯ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪತ್ರದಲ್ಲಿ ಆರೋಪಿಸಿರುವ ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ ಬ್ರಿಯಾನ್ ಅವರು, ಈ ವಿಷಯದಲ್ಲಿ ಚುನಾವಣಾ ಆಯೋಗ ಮಧ್ಯೆ ಪ್ರವೇಶಿಸುವಂತೆ ಕೋರಿದ್ದಾರೆ.
'ಸುವೇಂದು ಅಧಿಕಾರಿ ನೇಮಕ ಮಾಡಿಕೊಂಡಿರುವ ಮತ್ತು ಆಶ್ರಯ ನೀಡಿರುವ ಹೊರಗಿನ ಎಲ್ಲ ಸಾಮಾಜಿಕ ವಿರೋಧಿ ಅಂಶಗಳನ್ನು ಬಂಧಿಸಲು ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಬೇಕು ಎಂದು ನಾವು ವಿನಂತಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 1 ರಂದು ಮತದಾನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.