ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವಾರ ಬಾಕಿ ಇರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಯ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದಾರೆ.
ಸಂಕಲ್ಪ ಪತ್ರವನ್ನು (ಪ್ರಣಾಳಿಕೆ) ಬಿಡುಗಡೆ ಮಾಡಿದ ಅಮಿತ್ ಶಾ, ಇದು ಮಹಾರಾಷ್ಟ್ರದ ಆಶಯಗಳ ನಿರ್ಣಯ ಪತ್ರ ಎಂದು ಹೇಳಿದರು.
ಪ್ರಣಾಳಿಕೆಯಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಮೇಲೆ ವಿಶೇಷ ಗಮನ ಹರಿಸಲಾಗಿದೆ. ಬಡವರ ಕಲ್ಯಾಣಕ್ಕೆ ಬಿಜೆಪಿ ಬದ್ದವಾಗಿದೆ ಎಂದು ಅಮಿತ್ ಶಾ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್, ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೇಲಾರ್, ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.
* ರೈತರ ಸಾಲ ಮನ್ನಾ
* 25 ಲಕ್ಷ ಉದ್ಯೋಗ ಸೃಷ್ಟಿ
* ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
* ವಿದ್ಯುತ್ ಬಿಲ್‌ಗಳಲ್ಲಿ ಶೇ. 30ರಷ್ಟು ರಿಯಾಯಿತಿ
* ವೃದ್ಧಾಪ್ಯ ವೇತನ ₹ 2,100
* 25,000 ಮಹಿಳಾ ಪೊಲೀಸರ ನೇಮಕಾತಿ
* ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000
* ಹಳ್ಳಿಗಳಿಗೆ ಉತ್ತಮ ರಸ್ತೆ
ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ರಾಜ್ಯದ ಮತಗಳ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.