ADVERTISEMENT

ಪತ್ನಿಯನ್ನು ಬಿಟ್ಟ ಮೋದಿ ರಾಮಮಂದಿರ ಉದ್ಘಾಟನೆಗೆ ಯೋಗ್ಯರೇ?: ಸುಬ್ರಮಣಿಯನ್ ಸ್ವಾಮಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಡಿಸೆಂಬರ್ 2023, 15:50 IST
Last Updated 27 ಡಿಸೆಂಬರ್ 2023, 15:50 IST
<div class="paragraphs"><p>ಸುಬ್ರಮಣಿಯನ್‌ ಸ್ವಾಮಿ</p></div>

ಸುಬ್ರಮಣಿಯನ್‌ ಸ್ವಾಮಿ

   

ನವದೆಹಲಿ: ‘ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿ, ಕಷ್ಟಗಳನ್ನು ಎದುರಿಸಿದ ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣವಾಗುತ್ತಿದೆ. ಆದರೆ ಪತ್ನಿಯನ್ನೇ ತೊರೆದ ಪ್ರಧಾನಿ ನರೇಂದ್ರ ಮೋದಿ ಅವರು ಇದರ ಉದ್ಘಾಟನಾ ಪೂಜೆ ಹೇಗೆ ನೆರವೇರಿಸುತ್ತಾರೆ’ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.

ಅಯೋಧ್ಯೆಯಲ್ಲಿ ಜ. 22ರಂದು ನೆರವೇರಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ‘ಎಕ್ಸ್’ ವೇದಿಕೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ADVERTISEMENT

‘ರಾಮ ಸುಮಾರು ಒಂದೂವರೆ ದಶಕದಷ್ಟು ಕಾಲ ವನವಾಸವನ್ನು ಅನುಭವಿಸಿದ. ಅಪಹರಣಗೊಂಡ ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿದ. ಆದರೆ ಮೋದಿ ಅವರು ತಮ್ಮ ಪತ್ನಿಯನ್ನು ತ್ಯಜಿಸಿದವರು ಎಂಬುದು ಎಲ್ಲರಿಗೂ ತಿಳಿದ ವಿಷಯ. ಹಾಗಿದ್ದರೆ ಅವರು ಹೇಗೆ ಈ ಪೂಜೆ ನೆರವೇರಿಸುತ್ತಾರೆ? ಎಂದಿದ್ದಾರೆ.

‘ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯವನ್ನು ಮೋದಿ ಅವರು ನೆರವೇರಿಸಲು ರಾಮನ ಭಕ್ತರು ಹೇಗೆ ಅವಕಾಶ ನೀಡುತ್ತಾರೆ’ ಎಂದೂ ಸುಬ್ರಮಣಿಯನ್ ಸ್ವಾಮಿ ಕೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.