ADVERTISEMENT

ಪ್ಯಾಲೆಸ್ಟೀನ್ ಧ್ವಜ ಹಾರಾಟ: ಕ್ರಮ ಕೈಗೊಳ್ಳಲು ಸುವೇಂದು ಅಧಿಕಾರಿ ಆಗ್ರಹ

ಪಿಟಿಐ
Published 18 ಜುಲೈ 2024, 11:38 IST
Last Updated 18 ಜುಲೈ 2024, 11:38 IST
ಸುವೇಂದು ಅಧಿಕಾರಿ
ಸುವೇಂದು ಅಧಿಕಾರಿ   

ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಮೆರವಣಿಗೆಯಲ್ಲಿ ಪ್ಯಾಲೆಸ್ಟೀನ್‌ ಧ್ವಜ ಹಾರಿಸಿರುವ ವಿಡಿಯೊವನ್ನು ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ತಮ್ಮ ಜಾಲತಾಣ ಖಾತೆಯಲ್ಲಿ ಹಂಚಿಕೊಂಡು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

‘ಎಕ್ಸ್‌‘ನಲ್ಲಿ ವಿಡಿಯೊವನ್ನು ಹಂಚಿಕೊಂಡಿರುವ ಅಧಿಕಾರಿ, ‘ಬಹರಾಮ್‌ಪುರದಲ್ಲಿ ನಡೆದ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ಪ್ಯಾಲೆಸ್ಟೀನ್ ಧ್ವಜ ಹಾರಿಸಲಾಗಿದೆ. ತಪ್ಪಿತಸ್ಥರು ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಅವರ ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ಕೂಗಿದ್ದ ‘ಜೈ ಪ್ಯಾಲೆಸ್ಟೀನ್’ ಘೋಷಣೆಯಿಂದ ಪ್ರೇರಣೆ ಪಡೆದಿರಬಹುದು’ ಎಂದು ಹೇಳಿದ್ದಾರೆ. 

‘ಪೊಲೀಸ್‌ ವರಿಷ್ಠಾಧಿಕಾರಿ ಮತ್ತು ಪೊಲೀಸ್‌ ಮಹಾ ನಿರ್ದೇಶಕರು ಈ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ಆದರೆ ಪೊಲೀಸರು, ‘ಘಟನೆ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.