ಕನೌಜ್ (ಉತ್ತರ ಪ್ರದೇಶ): ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಬಿಜೆಪಿಯು ಭದ್ರತೆ ಹೆಸರಿನಲ್ಲಿ ಜನರಲ್ಲಿ ಭಯ ಬಿತ್ತಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಖಿಲೇಶ್, 'ಪ್ರಧಾನ ಮಂತ್ರಿಯವರ ಕನಸಿನ ಯೋಜನೆಯಲ್ಲಿ (ಹೊಸ ಸಂಸತ್ತಿನಲ್ಲಿ) ಕಳಪೆ ಭದ್ರತಾ ವ್ಯವಸ್ಥೆ ಕೈಗೊಂಡಿರುವುದು ನಾಚಿಕೆಗೇಡು. ಈ ಸರ್ಕಾರವು ಭದ್ರತೆಯ ಹೆಸರಿನಲ್ಲಿ ಜನರನ್ನು ಹೆದರಿಸಲು ಪ್ರಯತ್ನಿಸುತ್ತಿದೆ' ಎಂದು ಗಂಭೀರ ಆರೋಪ ಮಾಡಿದ್ದಾರೆ.
'ಮೂಕ ಸರ್ಕಾರಕ್ಕೆ ತಮ್ಮ ಸಂದೇಶವನ್ನು ತಲುಪಿಸುವುದಕ್ಕಾಗಿ ಯುವಕರು ಈ ನಿರ್ಧಾರ ಮಾಡಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು' ಎಂದು ಯಾದವ್ ಕಿವಿಮಾತು ಹೇಳಿದ್ದಾರೆ.
ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಂದರ್ಶಕರ ಗ್ಯಾಲರಿಯಲ್ಲಿದ್ದ ಇಬ್ಬರು ಯುವಕರು ಸದನಕ್ಕೆ ಜಿಗಿದು, ಘೋಷಣೆಗಳನ್ನು ಕೂಗುತ್ತಾ ಆತಂಕ ಸೃಷ್ಟಿಸಿದ್ದರು. ಇದೇ ವೇಳೆ ಇನ್ನಿಬ್ಬರು ಸಂಸತ್ತಿನ ಹೊರಗೆ ಪ್ರತಿಭಟಿಸಿದ್ದರು. ಪ್ರಕರಣದಲ್ಲಿ ಮೈಸೂರಿನ ಯುವಕ ಸೇರಿದಂತೆ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಎಲ್ಲರನ್ನೂ ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.