ADVERTISEMENT

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಸಾಕ್ಷಿ ಬಿಕೆಯು ಮುಖಂಡನ ಮೇಲೆ ಗುಂಡಿನ ದಾಳಿ

ಪಿಟಿಐ
Published 1 ಜೂನ್ 2022, 10:28 IST
Last Updated 1 ಜೂನ್ 2022, 10:28 IST
ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)
ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)   

ಲಖಿಂಪುರ ಖೇರಿ (ಉ.ಪ್ರದೇಶ): ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಾಕ್ಷಿಯಾಗಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ದಿಲ್‌ಬಾಗ್ ಸಿಂಗ್ ಅವರ ಮೇಲೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಬಿಕೆಯು (ಟಿಕಾಯತ್) ಜಿಲ್ಲಾಧ್ಯಕ್ಷರಾದ ದಿಲ್‌ಬಾಗ್ ತಮ್ಮ ಎಸ್‌‌ಯುವಿ ಕಾರಿನಲ್ಲಿ ಗೋಲಾ ಕೊತ್ವಾಲಿ ಪ್ರದೇಶದ ಅಲಿಗಂಜ್-ಮುಡಾ ರಸ್ತೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಆದರೆದಿಲ್‌ಬಾಗ್ ಸಿಂಗ್ ಅವರಿಗೆಯಾವುದೇ ಗಾಯವಾಗಿಲ್ಲ. ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 3ರಂದು ಲಖಿಂಪುರ ಖೇರಿ ಪ್ರಕರಣ ನಡೆದಿತ್ತು. ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸಿದ್ದ ರೈತರ ಮೇಲೆ ಕಾರು ಚಲಾಯಿಸಲಾಗಿತ್ತು. ಹಿಂಸಾಚಾರದಲ್ಲಿ ನಾಲ್ವರು ರೈತರು, ಓರ್ವ ಪತ್ರಕರ್ತ ಸೇರಿದಂತೆ ಎಂಟು ಮಂದಿ ಸಾವಿಗೀಡಾಗಿದ್ದರು.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.