ADVERTISEMENT

ಕೇರಳ | ಸಿಎಂ ಪಿಣರಾಯಿ ವಿರುದ್ಧ ಕಪ್ಪು ಬಾವುಟ, ಕಾಂಗ್ರೆಸ್ ಕಾರ್ಯಕರ್ತ ಬಂಧನ

ಪಿಟಿಐ
Published 18 ಫೆಬ್ರುವರಿ 2023, 9:52 IST
Last Updated 18 ಫೆಬ್ರುವರಿ 2023, 9:52 IST
ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್   

ಪಾಲಕ್ಕಾಡ್ (ಕೇರಳ): ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪಿಣರಾಯಿ ವಿಜಯನ್ ಅವರು ಬೆಂಗಾವಲು ಪಡೆಯೊಂದಿಗೆ ಪಾಲಕ್ಕಾಡ್ ಜಿಲ್ಲೆಯ ಚಾಲಿಸ್ಸೆರಿ ಮೂಲಕ ಹಾದು ಹೋಗುವಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾನೆ. ಆತನನ್ನು ಕೂಡಲೇ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚಾಲಿಸ್ಸೆರಿಯಲ್ಲಿ ಪಿಣರಾಯಿ ಕಾರ್ಯಕ್ರಮ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಯೂತ್ ಕಾಂಗ್ರೆಸ್‌ನ ನಾಲ್ವರು ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಕಾರ್ಯಕ್ರಮ ಮುಗಿದ ನಂತರ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.

ADVERTISEMENT

ಕಳೆದ ವಾರ, ಯೂತ್ ಕಾಂಗ್ರೆಸ್ ಕಾರ್ಯಕರ್ತರು ಎರ್ನಾಕುಲಂ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ವಿಜಯನ್ ಅವರ ವಿರುದ್ಧ ಕಪ್ಪು ಬಾವುಟ ತೋರಿಸಿದ್ದರು ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಪಿಣರಾಯಿ ಮಂಡಿಸಿರುವ ಬಜೆಟ್‌ನಲ್ಲಿ ಇಂಧನದ ಮೇಲೆ ಸೆಸ್ ವಿಧಿಸುವ ಬಜೆಟ್ ಪ್ರಸ್ತಾವನೆಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ, ವಿರೋಧ ಪಕ್ಷಗಳು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.