ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3ರ (ಜೀವ ಅಥವಾ ಆಸ್ತಿಗೆ ಹಾನಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಮಂಗಳವಾರ(ಡಿ.26) ಸಂಜೆ ಇಸ್ರೇಲ್ ರಾಯಭಾರ ಕಚೇರಿ ಬಳಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.
ಸಾಕ್ಷಿಗಳ ಹೇಳಿಕೆ ದಾಖಲು:
ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು, ಸಾಕ್ಷಿಗಳ ಹೇಳಿಕೆಯನ್ನು ಗುರುವಾರ ದಾಖಲಿಸಿಕೊಂಡಿದ್ದಾರೆ. ಸ್ಫೋಟ ಸಂಭವಿಸುವ ಕೆಲಹೊತ್ತಿಗೂ ಮುನ್ನ ಘಟನಾ ಸ್ಥಳದಲ್ಲಿ ಓಡಾಡುತ್ತಿದ್ದ ವ್ಯಕ್ತಿಗಳ ಪಟ್ಟಿಯನ್ನು ಸಿಸಿಟಿವಿ ದೃಶ್ಯಗಳ ನೆರವಿನಿಂದ ತಯಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಶಬ್ದ ಕೇಳಿಸಿಕೊಂಡಿದ್ದಾಗಿ ಮತ್ತು ಹೊಗೆ ಆವರಿಸಿದ್ದನ್ನು ನೋಡಿದ್ದಾಗಿ ಹೇಳಿರುವ ಒಟ್ಟು 10 ಜನರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.