ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇಂದು (ಗುರುವಾರ) ನಗರದ ಎಲ್ಲಾ ಶಾಲಾ– ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.
ಮುಂಬೈ ನಗರ, ಥಾಣೆ ಮತ್ತು ರಾಯಗಢ, ಪಾಲ್ಘರ್ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ( ಐಎಂಡಿ) ಗುರುವಾರ ರೆಡ್ ಅಲರ್ಟ್ ಘೋಷಿಸಿದೆ. ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಗೆ ’ಆರೆಂಜ್’ ಅಲರ್ಟ್ ಮತ್ತು ಸಿಂಧುದುರ್ಗ ಜಿಲ್ಲೆಗೆ ’ಯೆಲ್ಲೊ’ ಅಲರ್ಟ್ ಘೋಷಿಸಿದೆ.
ನಗರದ ಸುತ್ತಮುತ್ತ 10 ಸೆಂ.ಮೀ ಮಳೆಯಾಗಿದೆ. ಅಂಧೇರಿಯ ಮಲ್ಪಾ ಡೋಂಗ್ರಿ ಪ್ರದೇಶದಲ್ಲಿ 15.7 ಸೆಂ ಮೀ ಮಳೆ ಪ್ರಮಾಣ ದಾಖಲಾಗಿದೆ. ದಿಂಡೋಶಿಯಲ್ಲಿ 15.4 ಸೆಂ.ಮೀ, ಪಾಸ್‌ಪೊಲಿ 15.5 ಸೆಂ.ಮೀ ಮಳೆಯಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.