ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ ಯೋಧರೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಮೃತರನ್ನು ಹಿಲಾಲ್ ಅಹ್ಮದ್ ಎಂದು ಗುರುತಿಸಲಾಗಿದೆ. ಯೋಧನ ದೇಹದ ಮೇಲೆ ಬಂದೂಕಿನಿಂದ ದಾಳಿ ಮಾಡಿದ ಗಾಯದ ಗುರುತುಗಳು ಪತ್ತೆಯಾಗಿವೆ. ಹಿಲಾಲ್ ಮಂಗಳವಾರ ನಾಪತ್ತೆಯಾಗಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಯೋಧನ ಪತ್ತೆಗೆ ಭದ್ರತಾ ಪಡೆಗಳು ಭಾರಿ ಯೋಧ ಕಾರ್ಯಾಚರಣೆ ನಡೆಸಿದ್ದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂಬ ಗುಪ್ತಚರ ಮಾಹಿತಿ ಆಧರಿಸಿ ಸೇನೆ, ಪೊಲೀಸರು ಹಾಗೂ ಅರಣ್ಯ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಯೋಧ ನಾಪತ್ತೆಯಾಗಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.