ADVERTISEMENT

ಬೋಫೋರ್ಸ್‌ ಪ್ರಕರಣ: ಶೀಘ್ರ ವಿಚಾರಣೆ ನಡೆಸುವಂತೆ ‘ಸುಪ್ರೀಂ’ಗೆ ಮನವಿ

ಪಿಟಿಐ
Published 25 ಡಿಸೆಂಬರ್ 2021, 12:41 IST
Last Updated 25 ಡಿಸೆಂಬರ್ 2021, 12:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಬೋಪೋರ್ಸ್‌ ಪ್ರಕರಣದಲ್ಲಿ ಹಿಂದುಜಾ ಸಹೋದರರ ವಿರುದ್ಧದ ಎಲ್ಲ ಆರೋಪಗಳನ್ನು ರದ್ದುಗೊಳಿಸಿದ ದೆಹಲಿ ಹೈಕೋರ್ಟ್‌ನ 2005ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಶೀಘ್ರವೇ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಈ ಕುರಿತು ವಕೀಲ ಅಜಯ್‌ ಅಗರ್‌ವಾಲ್‌ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ ತೀರ್ಪಿನ ವಿರುದ್ಧ ಸಿಬಿಐ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್‌ 2018ರ ನವೆಂಬರ್‌ನಲ್ಲಿ ವಜಾಗೊಳಿಸಿತ್ತು. ಆದರೆ ಇದೇ ತೀರ್ಪಿನ ವಿರುದ್ಧ ತಾವು ಸಲ್ಲಿಸಿದ್ದ ಆಕ್ಷೇಪಣೆಗಳ ನೆಲೆಯಲ್ಲಿಯೇ ಮತ್ತೆ ವಿಚಾರಣೆಯನ್ನು ಸಿಬಿಐ ಕೈಗೆತ್ತಿಕೊಳ್ಳಬಹುದು ಎಂದು ಹೇಳಿತ್ತು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೈಕೋರ್ಟ್‌ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ 2005ರಲ್ಲಿಯೇ ಅರ್ಜಿ ಸಲ್ಲಿಸಿದ್ದೇನೆ. ನ್ಯಾಯದ ಹಿತದೃಷ್ಟಿಯಿಂದ ಈ ವಿಷಯವನ್ನು ಶೀಘ್ರವೇ ವಿಚಾರಣೆಗೆ ಒಳಪಡಿಸುವುದು ಸೂಕ್ತ ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.

ADVERTISEMENT

ಬೋಫೋರ್ಸ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆಯಾಗದ ಕಾರಣ ರಕ್ಷಣಾ ವಲಯದಲ್ಲಿ ವಂಚನೆಗಳು ಮರುಕಳಿಸುತ್ತಿವೆ ಎಂದು ಅವರು ಅರ್ಜಿಯಲ್ಲಿ ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.