ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ತನಿಖೆಗೆ ಒಳಗಾಗಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ತಮ್ಮದು ಕಷ್ಟಪಟ್ಟು ಸಂಪಾದಿಸಿದ ಹಣ ಎಂದು ಹೇಳಿದ್ದಾರೆ.
ಜಾರಿ ನಿರ್ದೇಶನಾಲಯದ ತನಿಖೆ ಬಳಿಕ ಜಾಕ್ವೆಲಿನ್ ಅವರ ಠೇವಣಿ ಖಾತೆಗಳನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
₹200 ಕೋಟಿ ಅಕ್ರಮ ಹಣಕಾಸು ವ್ಯವಹಾರದಲ್ಲಿ ಸುಕೇಶ್ ಚಂದ್ರಶೇಖರ್ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಕೂಡ ಆರೋಪಿಯಾಗಿದ್ದಾರೆ. ಅವರು ಜಾಕ್ವೆಲಿನ್‌ಗೆ ಉಡುಗೊರೆ ರೂಪದಲ್ಲಿ ₹10 ಕೋಟಿ ನೀಡಿರುವುದನ್ನು ಇ.ಡಿ ಅಧಿಕಾರಿಗಳು ಬಯಲಿಗೆಳೆದಿದ್ದರು.
ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿರುವುದು ನನ್ನ ಹಣ. ಅದನ್ನು ಕಷ್ಟಪಟ್ಟು ಗಳಿಸಿದ್ದೆ. ಸುಕೇಶ್ ಜತೆ ಗೆಳೆತನ ಬೆಳೆಸುವುದಕ್ಕೂ ಮೊದಲೇ ನಾನು ದುಡಿದಿದ್ದ ಹಣವದು. ಅದನ್ನು ಬ್ಯಾಂಕ್‌ನಲ್ಲಿ ಠೇವಣಿ ಇರಿಸಿದ್ದೆ. ಆದರೆ ಈಗ ವಂಚನೆ ಪ್ರಕರಣದಲ್ಲಿ ನನ್ನ ಹೆಸರು ಇರುವುದರಿಂದ, ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಾಕ್ವೆಲಿನ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.