ನವದೆಹಲಿ: ಇ–ಮೇಲ್ ಮೂಲಕ ದೆಹಲಿಯ ಎರಡು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಸಂದೇಶ ನೀಡಲಾಗಿದೆ ಎಂದು ಉಪ ಪೊಲೀಸ್ ಆಯುಕ್ತೆ (ಉತ್ತರ) ಎಂ.ಕೆ. ಮೀನಾ ಅವರು ತಿಳಿಸಿದರು.
‘ಬುರಾರಿ ಆಸ್ಪತ್ರೆಯಲ್ಲಿ ಬಾಂಬ್ ಇರಿಸಿರುವುದಾಗಿ ಇ–ಮೇಲ್ ಸಂದೇಶ ನೀಡಲಾಗಿತ್ತು. ಕೂಡಲೇ ಸ್ಥಳೀಯ ಪೊಲೀಸರು, ಬಾಂಬ್ ನಿಷ್ಕ್ರಿಯ ತಂಡ, ಶ್ವಾನದಳದವರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸಿದರು. ಯಾವುದೇ ಶಂಕಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದರು.
ಸಂಜಯ್ ಗಾಂಧಿ ಆಸ್ಪತ್ರೆಗೂ ಬೆದರಿಕೆ ಸಂದೇಶ ಬಂದಿತ್ತು. ಪೊಲೀಸರು ತೆರಳಿ ಶೋಧ ಕಾರ್ಯಾಚರಣೆ ನಡೆಸಿದರು ಎಂದು ಪೊಲೀಸರು ಹೇಳಿದ್ದಾರೆ.
ಈಚೆಗೆ ದೆಹಲಿಯ 100ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ರಷ್ಯಾದ ಕಂಪನಿಯೊಂದರ ಸರ್ವರ್‌ನಿಂದ ಇ–ಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದರ ಬೆನ್ನಲ್ಲೇ ಅಹಮದಾಬಾದ್‌ನ 10 ಶಾಲೆಗಳಿಗೆ ಬಾಂಬ್ ಸ್ಫೋಟದ ಬೆದರಿಕೆಯ ಇ–ಮೇಲ್ ಬಂದಿತ್ತು. ಆದರೆ ಇದು ಹುಸಿ ಬೆದರಿಕೆ ಎಂದು ಪೊಲೀಸರು ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.