ನವದೆಹಲಿ: ಕ್ಲಸ್ಟರ್ ಬಸ್‌ವೊಂದಕ್ಕೆ ಹುಸಿ ಬಾಂಬ್ ಬೆದರಿಕೆ ಹಾಕಿರುವ ಘಟನೆ ದೆಹಲಿಯ ನಜಾಫ್‌ಗಢದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ರಾತ್ರಿ 11:55ಕ್ಕೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನರೇಲಾ ಮತ್ತು ನಜಾಫ್‌ಗಢದ ನಡುವೆ ಸಂಚರಿಸುವ ಕ್ಲಸ್ಟರ್ ಬಸ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಲಾಯಿತು ಎಂದು ದೆಹಲಿ ಅಗ್ನಿಶಾಮಕ ಇಲಾಖೆಯ (ಡಿಎಫ್‌ಎಸ್) ಅಧಿಕಾರಿಗಳು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಎರಡು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು. ಜತೆಗೆ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.
ಬಸ್‌ನಲ್ಲಿ ತಂತಿಗಳನ್ನು ಸುತ್ತಿದ ಕೆಲವು ವಸ್ತುಗಳು ಪತ್ತೆಯಾಗಿವೆ. ಹೊರತುಪಡಿಸಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಕರೆ ಎನ್ನುವುದು ಖಚಿತವಾಯಿತು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.