ADVERTISEMENT

ಬಾಂಬ್‌ ಬೆದರಿಕೆ: ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಪಿಟಿಐ
Published 22 ಆಗಸ್ಟ್ 2024, 3:23 IST
Last Updated 22 ಆಗಸ್ಟ್ 2024, 3:23 IST
<div class="paragraphs"><p>ತಿರುವನಂತಪುರ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)</p></div>

ತಿರುವನಂತಪುರ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)

   

ತಿರುವನಂತಪುರ: ಮುಂಬೈನಿಂದ ಬಂದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ವಿಮಾನವು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಪ್ರಯಾಣಿಕರನ್ನು ಇಳಿಸಿದ ನಂತರ, ಶಿಷ್ಟಾಚಾರದಂತೆ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಒಯ್ಯಲಾಗಿದೆ.

ADVERTISEMENT

ವಿಮಾನವು ತಿರುವನಂತಪುರ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಬಾಂಬ್ ಬೆದರಿಕೆ ಇರುವುದಾಗಿ ಪೈಲಟ್‌ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಂಬ್‌ ಬೆದರಿಕೆ ಬಂದ ಮೂಲದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.