ADVERTISEMENT

ತೆಲಂಗಾಣದ ‘ಪ್ರಜಾ ಭವನ’ಕ್ಕೆ ಬಾಂಬ್ ಬೆದರಿಕೆ: ಪೊಲೀಸರಿಂದ ತಪಾಸಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಮೇ 2024, 10:36 IST
Last Updated 28 ಮೇ 2024, 10:36 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹೈದರಾಬಾದ್: ತೆಲಂಗಾಣದ ‘ಪ್ರಜಾ ಭವನ’ಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಅವರ ಅಧಿಕೃತ ನಿವಾಸ ಮತ್ತು ಸಾರ್ವಜನಿಕರ ಕುಂದುಕೊರತೆಗಳನ್ನು ದಾಖಲಿಸುವ ‘ಪ್ರಜಾ ಭವನ’ದಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬರು ಬೆದರಿಕೆ ಕರೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ಪೊಲೀಸ್ ಕಂಟ್ರೋಲ್ ರೂಮ್‌ಗೆ ಫೋನ್ ಕರೆ ಮಾಡಿದ್ದ ವ್ಯಕ್ತಿ, ಶೀಘ್ರವೇ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಕೂಡಲೇ ಎಚ್ಚೆತ್ತ ಪೊಲೀಸರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾ ಭವನದಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆಯಾಗಿದ್ದು, ಕರೆ ಮಾಡಿದ ವ್ಯಕ್ತಿಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾ ಭವನವನ್ನು ಈ ಹಿಂದೆ ‘ಪ್ರಗತಿ ಭವನ’ ಎಂದು ಕರೆಯಲಾಗುತ್ತಿತ್ತು. ಇದು ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸವಾಗಿತ್ತು.

ಈಚೆಗೆ ದೆಹಲಿಯ ನಾಲ್ಕು ಆಸ್ಪತ್ರೆಗಳು ಹಾಗೂ ಪ್ರತಿಷ್ಠಿತ ಲೇಡಿ ಶ್ರೀ ರಾಮ್ ಕಾಲೇಜು ಸೇರಿದಂತೆ ಸುಮಾರು 12 ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿದ್ದವು. ಜತೆಗೆ ಮೇ 3ರಂದು ಬೆಂಗಳೂರು ನಗರದ 3 ಪಂಚತಾರಾ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದ್ದು, ಪೊಲೀಸರು ಶೋಧ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.