ನವದೆಹಲಿ: ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಘಟನೆಗಳನ್ನು ತಡೆಯುವುದಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ನಾಗರಿಕ ವಿಮಾನಯಾನ ಸಚಿವಾಲಯ ಮುಂದಾಗಿದೆ.
ಬೆದರಿಕೆ ಕರೆ ಪ್ರಕರಣದ ಅಪರಾಧಿಗಳನ್ನು ‘ನೋ ಫ್ಲೈ’ ಪಟ್ಟಿಗೆ ಸೇರಿಸುವುದು ಸೇರಿದಂತೆ ವಿವಿಧ ಕಠಿಣ ಕ್ರಮ ಕೈಗೊಳ್ಳುವ ಚಿಂತನೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
‘ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಘಟನೆಗಳ ಕುರಿತು ಕಠಿಣ ಕ್ರಮ ಕೈಗೊಳ್ಳುವುದಕ್ಕಾಗಿ ನಿಯಮಗಳಿಗೆ ತಿದ್ದುಪಡಿ ತರುವ ಚಿಂತನೆ ಇದೆ’ ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಹೇಳಿದ್ದಾರೆ.
ಕಳೆದ ನಾಲ್ಕು ದಿನಗಳಲ್ಲಿ ವಿವಿಧ ಸಂಸ್ಥೆಗಳಿಗೆ ಸೇರಿದ ಕನಿಷ್ಠ 25 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿವೆ. ಕೆಲ ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.