ADVERTISEMENT

ಆಂಧ್ರಪ್ರದೇಶದ ಮೂರು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಸಂದೇಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಅಕ್ಟೋಬರ್ 2024, 5:30 IST
Last Updated 25 ಅಕ್ಟೋಬರ್ 2024, 5:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಅಮರಾವತಿ: ದೇಶದಾದ್ಯಂತ ಸಿಆರ್‌ಪಿಎಫ್ ಶಾಲೆಗಳು ಸೇರಿದಂತೆ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳ ಬಾಂಬ್‌ ಬೆದರಿಕೆ ಪ್ರಕರಣಗಳು ಮಾಸುವ ಮುನ್ನವೇ ಆಂಧ್ರಪ್ರದೇಶದ ಮೂರು ಪ್ರಮುಖ ಹೋಟೆಲ್‌ಗಳಿಗೆ ಇಂದು (ಶುಕ್ರವಾರ) ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಮೂರು ಪ್ರಮುಖ ಹೋಟೆಲ್‌ಗಳಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಕುರಿತು ಎಫ್‌ಐಆರ್ ದಾಖಲಿಸಲಾಗಿದ್ದು, ವಿವಿಧ ಅಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದು ತಿರುಪತಿ ಪೂರ್ವ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶ್ರೀನಿವಾಸುಲು ತಿಳಿಸಿದ್ದಾರೆ.

ADVERTISEMENT

‘ಮೂರು ಹೋಟೆಲ್‌ಗಳಲ್ಲೂ ಬಾಂಬ್‌ ನಿಷ್ಕ್ರಿಯ, ಬಾಂಬ್‌ ಪತ್ತೆ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಳೆದ 11 ದಿನಗಳಲ್ಲಿ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ದೇಶೀಯ ಮತ್ತು ಅಂತರರಾಷ್ಟ್ರೀಯ 250 ವಿಮಾನಗಳಿಗೆ ಬಾಂಬ್‌ ಬೆದರಿಕೆಗಳು ಬಂದಿದ್ದವು. ಏರ್‌ ಇಂಡಿಯಾ, ವಿಸ್ತಾರಾ ಮತ್ತು ಇಂಡಿಗೊ, ಆಕಾಸಾ ಏರ್‌ ಸಂಸ್ಥೆಗಳ ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆಗಳು ಬಂದಿದ್ದವು.

ರಾಷ್ಟ್ರ ರಾಜಧಾನಿ ದೆಹಲಿಯ ರೋಹಿಣಿ ಪ್ರದೇಶದ ಸಿಆರ್‌ಪಿಎಫ್ ಶಾಲೆ ಬಳಿಯ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಇಂದು (ಮಂಗಳವಾರ) ದೇಶದಾದ್ಯಂತ ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.