ADVERTISEMENT

ದೆಹಲಿ: 2ನೇ ತರಗತಿಯ ವಿದ್ಯಾರ್ಥಿಯ ಖಾಸಗಿ ಭಾಗಕ್ಕೆ ದಾರ ಕಟ್ಟಿ ಹಲ್ಲೆ

ಪಿಟಿಐ
Published 31 ಡಿಸೆಂಬರ್ 2022, 11:19 IST
Last Updated 31 ಡಿಸೆಂಬರ್ 2022, 11:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎರಡನೇ ತರಗತಿಯ ವಿದ್ಯಾರ್ಥಿಯ ಖಾಸಗಿ ಭಾಗಕ್ಕೆ ನೈಲಾನ್ ಮಾದರಿಯ ದಾರವನ್ನು ಕಟ್ಟಿ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ದಕ್ಷಿಣ ದೆಹಲಿಯ ಕಿದ್ವಾಯಿ ನಗರ ಪ್ರದೇಶದ ಎನ್‌ಡಿಎಂಸಿ ಶಾಲೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ದೆಹಲಿ ಮುನ್ಸಿಪಲ್ ಕೌನ್ಸಿಲ್ ಅಧಿಕಾರಿಗಳು ತಿಳಿಸಿದ್ದಾರೆ.

ಎಂಟು ವರ್ಷದ ಬಾಲಕ ಬುಧವಾರದಂದು ಸ್ನಾನ ಮಾಡುತ್ತಿದ್ದಾಗ ಈ ವಿಷಯ ಪೋಷಕರ ಗಮನಕ್ಕೆ ಬಂದಿದೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ADVERTISEMENT

ಮಗುವಿನ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗಿದೆ.

ಬಾಲಕನ ಖಾಸಗಿ ಭಾಗಕ್ಕೆ ಸಹ ವಿದ್ಯಾರ್ಥಿಗಳು ನೈಲಾನ್ ಮಾದರಿಯ ದಾರ ಕಟ್ಟಿ ಹಿಂಸೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಾಲಕನಿಗೆ ಇತರ ಮಕ್ಕಳನ್ನು ಗುರುತಿಸಲು ಸಾಧ್ಯವಾಗದ ಕಾರಣ ಇದುವರೆಗೆ ಪ್ರಕರಣ ದಾಖಲಿಸಿಲ್ಲ. ಈ ಕುರಿತು ಕಾನೂನು ಸಲಹೆಯನ್ನು ಪಡೆಯಲಾಗುವುದು. ತಪ್ಪಿತ್ತಸ್ಥರನ್ನು ಗುರುತಿಸಲು ಮಗುವನ್ನು ಶಾಲೆಗೆ ಕರೆದುಕೊಂಡು ಹೋಗಲಾಗುವುದು ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.