ಹೈದರಾಬಾದ್: ಶಾಲೆಯೊಂದರಲ್ಲಿ 11 ವರ್ಷದ ಬಾಲಕನೊಬ್ಬ ಮಧ್ಯಾಹ್ನದ ಊಟದಲ್ಲಿ ಪೂರಿ ತಿನ್ನುವ ವೇಳೆ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ನಿಮ್ಮ ಮಗ ಊಟದ ಸಮಯದಲ್ಲಿ ಮೂರು ಪೂರಿಗಳನ್ನು ಒಟ್ಟಿಗೆ ಸೇವಿಸಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಶಾಲೆಯಿಂದ ಕರೆ ಬಂದಿತ್ತು' ಎಂದು ಮೃತ ಬಾಲಕನ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಸಿರುಗಟ್ಟಿ ಅಸ್ವಸ್ಥನಾಗಿದ್ದ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಶಾಲಾ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.