ಕೋಯಿಕ್ಕೋಡ್: ಕೇರಳದಲ್ಲಿ ನಿಪಾ ವೈರಾಣು ಮತ್ತೆ ಕಾಣಿಸಿಕೊಂಡಿದೆ. ಮಲ್ಲಪ್ಪುರಂ ಜಿಲ್ಲೆಯಲ್ಲಿ ನಿಪಾ ವೈರಸ್ ತಗುಲಿ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಈ ಕುರಿತು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.
ಚಿಕಿತ್ಸೆ ಪಡೆಯುತ್ತಿದ್ದ ಮಲಪ್ಪುರಂ ಜಿಲ್ಲೆಯ ಪಾಂಡಿಕ್ಕಾಡ್ ಮೂಲದ ಬಾಲಕನಲ್ಲಿ ನಿಪಾ ಸೋಂಕಿರುವುದನ್ನು ಪುಣೆಯಲ್ಲಿರುವ ರಾಷ್ಟ್ರೀಯ ವೈರಾಣು ಸಂಸ್ಥೆಯು (ಎನ್‌ಐವಿ) ಶನಿವಾರ ದೃಢೀಕರಿಸಿತ್ತು.
'ಬಾಲಕನಿಗೆ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಒದಗಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ 10.50ರ ವೇಳೆಗೆ ಮೃತಪಟ್ಟಿದ್ದಾನೆ' ಎಂದು ಆರೋಗ್ಯ ಸಚಿವೆ ತಿಳಿಸಿದ್ದಾರೆ.
'ಅಂತರರಾಷ್ಟ್ರೀಯ ಮಟ್ಟದ ಮಾನದಂಡಗಳನ್ನು ಪಾಲಿಸಿ ಬಾಲಕನ ಅಂತ್ಯಕ್ರಿಯೆ ನೇರವೇರಲಿದೆ' ಎಂದು ಅವರು ತಿಳಿಸಿದ್ದಾರೆ.
ಕೇರಳದ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಬಾಲಕನ ಸಂಪರ್ಕ ಹೊಂದಿದ್ದ ಜನರ ಮಾಹಿತಿ ಕಲೆ ಹಾಕಿ, ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಿದೆ. ಅವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.