ADVERTISEMENT

BREAKING | ದೆಹಲಿ ವಿಮಾನ ನಿಲ್ದಾಣಕ್ಕೆ ಅಣು ಬಾಂಬ್ ಬೆದರಿಕೆ; ಇಬ್ಬರ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಏಪ್ರಿಲ್ 2024, 5:55 IST
Last Updated 8 ಏಪ್ರಿಲ್ 2024, 5:55 IST
<div class="paragraphs"><p>ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ</p></div>

ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ

   

ಸಂಗ್ರಹ ಚಿತ್ರ – ಪಿಟಿಐ

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಮಾಣು ಬಾಂಬ್‌ ಹಾಕುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ.

ADVERTISEMENT

ಈ ಘಟನೆ ಏಪ್ರಿಲ್‌ 5ರಂದು ನಡೆದಿದ್ದು, ತಡವಾಗಿ ವರದಿಯಾಗಿದೆ ಎಂದು ಸುದ್ದಿ ಸಂಸ್ಥೆ 'ಎಎನ್‌ಐ' ತಿಳಿಸಿದೆ.

ದೆಹಲಿ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿತ ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.