ಹೈದರಾಬಾದ್: ಸಮಂತಾ ಮತ್ತು ನಾಗಚೈತನ್ಯ ವಿಚ್ಛೇದನಕ್ಕೆ ಬಿಆರ್‌ಎಸ್ ನಾಯಕ ಕೆ.ಟಿ. ರಾಮರಾವ್ ಕಾರಣ ಎನ್ನುವ ಮೂಲಕ ತೆಲಂಗಾಣ ಸಚಿವೆ ಕೊಂಡಾ ಸುರೇಖಾ, ತನ್ನ ವಿರುದ್ಧ ದುರುದ್ದೇಶಪೂರಿತ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ರಾಮರಾವ್ ಅವರು ಸುರೇಖಾ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡುವ ಮೂಲಕ ವೈಯಕ್ತಿಕ ದಾಳಿ ನಡೆಸಿದ್ದರ ವಿರುದ್ಧ ಧ್ವನಿಯೆತ್ತಿದ್ದೇನೆ. ನ್ಯಾಯಾಲಯದಲ್ಲಿಯೇ ಸತ್ಯ ಹೊರಬರಲಿದೆ. ನನ್ನ ವಿರುದ್ಧ ದುರುದ್ದೇಶಪೂರಿತ ಕೀಳು ಮಟ್ಟದ ಹೇಳಿಕೆ ನೀಡಿದ್ದ ಸಚಿವೆ ಸುರೇಖಾ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ರಾಮರಾವ್ ಈ ಮೊದಲು ನಗರದ ನ್ಯಾಯಾಲಯದಲ್ಲಿ ಸುರೇಖಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
‘ರಾಜಕೀಯ ಟೀಕೆಯ ಹೆಸರಿನಲ್ಲಿ ಏನು ಬೇಕಾದರೂ ಮಾತನಾಡಬಹುದು ಎಂದು ಭಾವಿಸುವವರಿಗೆ ಈ ಮೊಕದ್ದಮೆ ಒಂದು ಪಾಠವಾಗಲಿದೆ ಎಂದು ನಾನು ಭಾವಿಸುತ್ತೇನೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.