ಹೈದರಾಬಾದ್: 2002ರ ಗುಜರಾತ್ ಗಲಭೆಗಳ ಕುರಿತ ಬಿಬಿಸಿಯ 'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಸಾಕ್ಷ್ಯಚಿತ್ರವನ್ನು ಹೈದರಾಬಾದ್‌ನ ಒಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಅನುಮತಿ ಇಲ್ಲದೆ ಪ್ರದರ್ಶಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ವಿದ್ಯಾರ್ಥಿ ಸಂಘಟನೆಯ ಆರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿರುವ ಘಟನೆ ನಡೆದಿದೆ.
ಬುಧವಾರ ಕ್ಯಾಂಪಸ್ ಮುಂದೆ ಜಮಾಯಿಸಿದ್ದ ಆರು ಮಂದಿ ಬಿಆರ್‌ಎಸ್ ವಿದ್ಯಾರ್ಥಿಗಳು ಅನುಮಿತಿಯಿಲ್ಲದೆ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಲು ಮುಂದಾಗಿದ್ದರು. ಅವರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲು ಯೋಜನೆ ಹಾಕಿಕೊಂಡಿದ್ದರು. ತಕ್ಷಣವೇ ಅದನ್ನು ತಡೆಹಿಡಿಯಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಮೊದಲು ಬಿಬಿಸಿ ನಿರ್ಮಿಸಿರುವ ‘ಇಂಡಿಯಾ:ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ತಡೆ ಹಿಡಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.