ADVERTISEMENT

ಗಡಿ ರಾಜ್ಯಗಳಲ್ಲಿ ಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿ ಹೆಚ್ಚಳ: ಸರ್ವಾಧಿಕಾರವೆಂದ ಎಎಪಿ

ಪಿಟಿಐ
Published 15 ಅಕ್ಟೋಬರ್ 2021, 2:56 IST
Last Updated 15 ಅಕ್ಟೋಬರ್ 2021, 2:56 IST
ಸಾಂದರ್ಭಿಕ ಚಿತ್ರ (ಪಿಟಿಐ)
ಸಾಂದರ್ಭಿಕ ಚಿತ್ರ (ಪಿಟಿಐ)   

ನವದೆಹಲಿ: ಪಂಜಾಬ್‌ ಸೇರಿದಂತೆ ಇತರ ರಾಜ್ಯಗಳಲ್ಲಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್‌) ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸಿದ ಕೇಂದ್ರದ ಕ್ರಮವನ್ನು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ನೇತೃತ್ವದ ಎಎಪಿ ವಿರೋಧಿಸಿದ್ದು, ಇದೊಂದು ಸರ್ವಾಧಿಕಾರದ ಧೋರಣೆ ಎಂದಿದೆ.

'ನೀವು (ಕೇಂದ್ರ ಸರ್ಕಾರ) ಬಿಎಸ್‌ಎಫ್‌ ಪಡೆಯ ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸುವ ಮೂಲಕ ರಾಜ್ಯ ಪೊಲೀಸರ ಅಧಿಕಾರ ವ್ಯಾಪ್ತಿಯನ್ನು ಕಡಿಮೆಗೊಳಿಸಿದ್ದೀರಿ. ಇದೊಂದು ರೀತಿಯ ದಾದಾಗಿರಿ ಮತ್ತು ಸರ್ವಾಧಿಕಾರ. ಇದನ್ನು ಯಾವುದೇ ಪಕ್ಷ ಅಥವಾ ಯಾವುದೇ ರಾಜ್ಯ ಸರ್ಕಾರ ಮತ್ತು ರಾಜ್ಯದ ಜನತೆ ಇಷ್ಟಪಡುವುದಿಲ್ಲ' ಎಂದು ಎಎಪಿಯ ಮುಖ್ಯ ವಕ್ತಾರ ಸೌರಭ್‌ ಭಾರದ್ವಾಜ್‌ ಹೇಳಿದ್ದಾರೆ.

ಅಂತರರಾಷ್ಟ್ರೀಯ ಗಡಿ ಹೊಂದಿರುವ ಪಂಜಾಬ್‌, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ 15 ಕಿ.ಮೀ.ಯಷ್ಟಿದ್ದ ಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿಯನ್ನು 50 ಕಿ.ಮೀ.ಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಬಿಎಸ್‌ಎಫ್‌ ಕಾಯ್ದೆಯನ್ನು ಇತ್ತೀಚೆಗೆ ತಿದ್ದುಪಡಿ ಮಾಡಿದೆ.

ADVERTISEMENT

'ಎಲ್ಲ ರಾಜ್ಯಗಳ ಸಹಯೋಗದೊಂದಿಗೆ ಈ ನಿರ್ಧಾರವನ್ನು ಕೇಂದ್ರ ಕೈಗೊಂಡಿದ್ದರೆ ಎಲ್ಲರೂ ಸ್ವಾಗತಿಸುತ್ತಿದ್ದರು. ಕೇಂದ್ರವು ರಾಜ್ಯಗಳ ಸಹಯೋಗದೊಂದಿಗೆ ಕೆಲಸ ಮಾಡಬೇಕು. ಸರ್ವಾಧಿಕಾರಿತನವನ್ನು ನಾವು ಪುರಸ್ಕರಿಸುವುದಿಲ್ಲ' ಎಂದು ಸೌರಭ್‌ ಭಾರದ್ವಾಜ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.