ADVERTISEMENT

ಸ್ವಾತಂತ್ರ್ಯ ದಿನಾಚರಣೆ: ಭಾರತ–ಪಾಕ್‌ ಗಡಿಯಲ್ಲಿ ಸಿಹಿ ವಿನಿಮಯ

ಪಿಟಿಐ
Published 15 ಆಗಸ್ಟ್ 2021, 12:40 IST
Last Updated 15 ಆಗಸ್ಟ್ 2021, 12:40 IST
ಜಮ್ಮುವಿನಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಸಿಬ್ಬಂದಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪಾಕಿಸ್ತಾನದ ಗಡಿ ಭದ್ರತಾ ಸಿಬ್ಬಂದಿಯೊಂದಿಗೆ ಸಿಹಿ ವಿನಿಮಯ ಮಾಡಿಕೊಂಡರು –ಪಿಟಿಐ ಚಿತ್ರ
ಜಮ್ಮುವಿನಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಸಿಬ್ಬಂದಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪಾಕಿಸ್ತಾನದ ಗಡಿ ಭದ್ರತಾ ಸಿಬ್ಬಂದಿಯೊಂದಿಗೆ ಸಿಹಿ ವಿನಿಮಯ ಮಾಡಿಕೊಂಡರು –ಪಿಟಿಐ ಚಿತ್ರ   

ಜಮ್ಮು, ಅಟ್ಟಾರಿ: ‘ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತೀಯ ಸೇನೆ ಮತ್ತು ಬಿಎಸ್‌ಎಫ್ ಸಿಬ್ಬಂದಿ ಭಾನುವಾರ ಪಾಕಿಸ್ತಾನದ ಗಡಿ ಭದ್ರತಾ ಯೋಧರೊಂದಿಗೆ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತರಾಷ್ಟ್ರೀಯ ಗಡಿ (ಐಬಿ)ಯಲ್ಲಿ ಸಿಹಿ ವಿನಿಮಯ ಮಾಡಿಕೊಂಡರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಭಾರತೀಯ ಸೇನೆಯು ಪಾಕಿಸ್ತಾನದ ಸೇನಾ ಪಡೆಗಳೊಂದಿಗೆ ಮೆಂಧರ್‌ನ ತಟಪಾನಿ ಕ್ರಾಸಿಂಗ್ ಪಾಯಿಂಟ್ ಮತ್ತು ಪೂಂಚ್ ಜಿಲ್ಲೆಯ ಎಲ್‌ಒಸಿ ಉದ್ದಕ್ಕೂ ರಾವಲಕೋಟ್ ಕ್ರಾಸಿಂಗ್ ಪಾಯಿಂಟ್‌ನಲ್ಲಿ ಸಿಹಿ ಮತ್ತು ಅಭಿನಂದನೆಗಳನ್ನು ವಿನಿಮಯ ಮಾಡಿಕೊಂಡಿದೆ’ ಎಂದು ರಕ್ಷಣಾ ಇಲಾಖೆಯ ವಕ್ತಾರರು ಮಾಹಿತಿ ನೀಡಿದ್ದಾರೆ.

‘ಅಮೃತಸರದಿಂದ 35 ಕಿ.ಮೀ. ದೂರವಿರುವ ಅಟ್ಟಾರಿ–ವಾಘಾ ಗಡಿಯಲ್ಲಿ ಭಾರತದ ಬಿಎಸ್‌ಎಫ್ ಪಡೆಯು ಪಾಕಿಸ್ತಾನದ ಗಡಿಭದ್ರತಾ ಯೋಧರೊಂದಿಗೆ ಸಿಹಿ ವಿನಿಮಯ ಮಾಡಿಕೊಂಡಿತು. ಎರಡೂ ಕಡೆಯ ಭದ್ರತಾ ಸಿಬ್ಬಂದಿ ಪರಸ್ಪರ ಕೈಕುಲುಕಿದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.