ADVERTISEMENT

ಜಮ್ಮು –ಕಾಶ್ಮೀರ: ಪಾಕ್‌ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್‌

ಪಿಟಿಐ
Published 11 ಮೇ 2024, 5:15 IST
Last Updated 11 ಮೇ 2024, 5:15 IST
<div class="paragraphs"><p> ಭಾರತೀಯ ಸೇನೆ</p></div>

ಭಾರತೀಯ ಸೇನೆ

   

ಸಾಂಬಾ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್‌ಎಫ್ ಪಡೆಗಳು ಶುಕ್ರವಾರ ತಡರಾತ್ರಿ ಪಾಕ್‌ ಗಡಿಯಲ್ಲಿ ಡ್ರೋನ್‌ ಹಾರಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿದ್ದರು. ಕೂಡಲೇ ಹಲವು ಸುತ್ತು ಗುಂಡು ಹಾರಿಸುವ ಮೂಲಕ ಡ್ರೋನ್‌ ಅನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಡ್ರೋನ್ ಮೂಲಕ ಶಸ್ತ್ರಾಸ್ತ್ರಗಳು ಅಥವಾ ಮಾದಕ ವಸ್ತುಗಳನ್ನು ಸಾಗಾಟ ನಡೆಸಿರುವ ಬಗ್ಗೆ ರಾಮ್‌ಘರ್ ಸೆಕ್ಟರ್‌ನ ನಾರಾಯಣಪುರದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈಚೆಗೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್–ಎ–ತಯಬಾ ಉಗ್ರ ಸಂಘಟನೆಯ ಘಟಕವಾದ ‘ಟಿಆರ್‌ಎಫ್‌’ನ ಕಮಾಂಡರ್‌ ಸೇರಿದಂತೆ ಇಬ್ಬರು ಉಗ್ರರು ಹತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.