ADVERTISEMENT

BSNL ನಿಂದ 4G ಸೇವೆ ಆರಂಭ: 10 ಸಾವಿರ ಟವರ್‌ಗಳು ಮೇಲ್ದರ್ಜೆಗೆ

ಪಿಟಿಐ
Published 5 ಜುಲೈ 2024, 14:20 IST
Last Updated 5 ಜುಲೈ 2024, 14:20 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಚೆನ್ನೈ: ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ಲಿಮಿಟೆಡ್‌ ಶೀಘ್ರದಲ್ಲಿ 4ಜಿ ಸೇವೆಯನ್ನು ಆರಂಭಿಸುತ್ತಿದ್ದು, ಇದಕ್ಕಾಗಿ ದೇಶವ್ಯಾಪಿ 10 ಸಾವಿರ ಟವರ್‌ಗಳನ್ನು ಮೇಲ್ದರ್ಜೆಗೆ ಏರಿಸಿದೆ.

ಈ ವಿಷಯವನ್ನು ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಬಿಎಸ್‌ಎನ್‌ಎಲ್, ‘ಆತ್ಮನಿರ್ಭರ ಭಾರತ’ ಯೋಜನೆ ಅಡಿಯಲ್ಲಿ ಶೀಘ್ರದಲ್ಲಿ 4ಜಿ ಸೇವೆ ಆರಂಭವಾಗಲಿದೆ ಎಂದು ಹೇಳಿದೆ.

ADVERTISEMENT

ಇದಕ್ಕೆ ಸಂಬಂಧಿಸಿದಂತೆ ಚೆನ್ನೈ ಹಾಗೂ ಸುತ್ತಮುತ್ತಲಿನ ತಿರುವಳ್ಳೂರು, ಕಾಂಚೀಪುರಂ ಹಾಗೂ ಚೆಂಗಲಪಟ್ಟು ಜಿಲ್ಲೆಗಳಲ್ಲಿ ಶೀಘ್ರದಲ್ಲಿ 4ಜಿ ಸೇವೆ ಲಭ್ಯವಾಗಲಿದೆ ಎಂದು ವರದಿಯಾಗಿದೆ. ತಮಿಳುನಾಡಿನಲ್ಲಿ ಬಿಎಸ್‌ಎನ್‌ಎಲ್‌ ತನ್ನ IX.2 project ಯೋಜನೆಯಡಿಯಲ್ಲಿ ಈ ಜಿಲ್ಲೆಗಳಲ್ಲಿ 2,114ರಷ್ಟು 4ಜಿ ಟವರ್‌ಗಳನ್ನು ಅಳವಡಿಸುವ ಕಾರ್ಯ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಯೋಜನೆಗೆ ಒಟ್ಟು ₹16.25 ಕೋಟಿ ವೆಚ್ಚವಾಗಲಿದ್ದು, ಕೇಂದ್ರದ ಯೂನಿವರ್ಸಲ್ ಸರ್ವೀಸ್ ಆಬ್ಲಿಗೇಷನ್‌ (USO) ಹಣ ಹೂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.