ADVERTISEMENT

ಒಳಮೀಸಲಾತಿ | ಸುಪ್ರೀಂ ಕೋರ್ಟ್‌ ತೀರ್ಪನ್ನು ಬಿಎಸ್‌ಪಿ ಒಪ್ಪುವುದಿಲ್ಲ: ಮಾಯಾವತಿ

ಪಿಟಿಐ
Published 4 ಆಗಸ್ಟ್ 2024, 13:34 IST
Last Updated 4 ಆಗಸ್ಟ್ 2024, 13:34 IST
<div class="paragraphs"><p>ಮಾಯಾವತಿ&nbsp;</p></div>

ಮಾಯಾವತಿ 

   

ಲಖನೌ: ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಉಪವರ್ಗೀಕರಣಕ್ಕೆ ಅವಕಾಶ ನೀಡುವ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ತಮ್ಮ ಪಕ್ಷ ಒಪ್ಪುವುದಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಒಳಗಿನ ಉಪವರ್ಗೀಕರಣವನ್ನು ಕೋರ್ಟ್‌ ಅನುಮತಿಸಿದೆ. ಆದರೆ, ನಮ್ಮ ಪಕ್ಷವು ಇದನ್ನು ಒಪ್ಪುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.

ADVERTISEMENT

‘ಎಸ್‌ಸಿ ಮತ್ತು ಎಸ್‌ಟಿಗೆ ಸೇರಿದ ಜನರು ಎದುರಿಸುತ್ತಿರುವ ದೌರ್ಜನ್ಯಗಳನ್ನು ಗುಂಪಾಗಿ ಎದುರಿಸಲಾಗಿದೆ ಮತ್ತು ಈ ಗುಂಪು ಸಮಾನವಾಗಿದೆ. ಇದರಲ್ಲಿ ಯಾವುದೇ ರೀತಿಯ ಉಪವರ್ಗೀಕರಣ ಮಾಡುವುದು ಸರಿಯಲ್ಲ’ ಎಂದು ಅವರು ಹೇಳಿದ್ದಾರೆ.

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹೆಚ್ಚು ಹಿಂದುಳಿದಿರುವ ಜಾತಿಗಳ ಅಭಿವೃದ್ಧಿಯ ಉದ್ದೇಶದಿಂದ ಆ ಜಾತಿಗಳಿಗೆ ಸೇರಿದವರಿಗೆ ಮೀಸಲಾತಿ ಕಲ್ಪಿಸಲು, ಒಳಮೀಸಲಾತಿ ನೀಡುವ ಸಾಂವಿಧಾನಿಕ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್‌ ಗುರುವಾರ ಆದೇಶ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.