ಲಖನೌ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಬಹುಜನ ಸಮಾಜವಾದಿ ಪಕ್ಷವು ಬಿಜೆಪಿ ಜತೆಗೆ ಇರಲಿದೆ ಎಂದು ಪಕ್ಷದ ವರಿಷ್ಠರಾದ ಮಾಯಾವತಿ ಹೇಳಿದ್ದಾರೆ.
ಲಖನೌನಲ್ಲಿ ಸೋಮವಾರ ಮಾತನಾಡಿರುವ ಅವರು, 'ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವುದು, ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿರುವುದು ರಾಷ್ಟ್ರದ ದೃಷ್ಟಿಯಿಂದ ಒಳ್ಳೆಯದಲ್ಲ. ಇದು ಕಳವಳಕಾರಿ,' ಎಂದು ಮಾಯಾವತಿ ಹೇಳಿದ್ದಾರೆ.
ಅಲ್ಲದೆ, ಗಡಿ ವಿಚಾರದಲ್ಲಿ ಬಹುಜನ ಸಮಾಜವಾದಿ ಪಕ್ಷವು ಬಿಜೆಪಿ ಜತೆಗೆ ಇರಲಿದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.
ಒಂದೆಡೆ ಕೋವಿಡ್ ಮತ್ತೊಂದೆಡೆ ಇಂಧನ
ಒಂದು ಕಡೆ, ಕೋವಿಡ್–19ನಿಂದಾಗಿ ನಾಗರಿಕರು ತೊಂದರೆಗೀಡಾಗಿದ್ದಾರೆ. ಮತ್ತೊಂದೆಡೆ, ಈ ನಿರಂತರ ಇಂಧನ ಬೆಲೆ ಏರಿಕೆಯು ಜನರ ತೊಂದರೆಗಳನ್ನು ಮತ್ತಷ್ಟು ಹೆಚ್ಚಾಗಿಸಿದೆ. ಕೇಂದ್ರ ಸರ್ಕಾರವು ಶೀಘ್ರದಲ್ಲೇ ದೇಶದಲ್ಲಿ ಇಂಧನ ಬೆಲೆಯನ್ನು ನಿಯಂತ್ರಿಸಬೇಕು ಎಂದು ಮಾಯಾವತಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.