ನವದೆಹಲಿ: ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠವು ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ.
ಯಡಿಯೂರಪ್ಪ ಸೇರಿದಂತೆ ಒಂಬತ್ತು ಮಂದಿ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆಗೆ ಆದೇಶಿಸುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.