ನವದೆಹಲಿ:ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗವು ಸೋಮವಾರದಿಂದ ಆರಂಭವಾಗಲಿದ್ದು, ನಿರುದ್ಯೋಗ, ಇಪಿಎಫ್ ಬಡ್ಡಿದರ ಕಡಿತ, ಉಕ್ರೇನ್‌ನಿಂದ ಭಾರತೀಯರ ತೆರವು ಮೊದಲಾದ ವಿಷಯಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.ಬಜೆಟ್‌ಗೆ ಅನುಮೋದನೆ ಪಡೆದ ಬಳಿಕ ಏಪ್ರಿಲ್ 8ರಂದು ಅಧಿವೇಶನ ಮುಕ್ತಾಯವಾಗಲಿದೆ.
ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ ಬಜೆಟ್‌ಗೆ ಅನುಮೋದನೆ ಪಡೆಯಲು ಸರ್ಕಾರ ಉದ್ದೇಶಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜಮ್ಮು ಕಾಶ್ಮೀರದ ಆಯವ್ಯಯವನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಸಂವಿಧಾನ (ಪರಿಶಿಷ್ಟ ಪಂಗಡಗಳು) ಆದೇಶ (ತಿದ್ದುಪಡಿ) ಮಸೂದೆಯನ್ನು ಮಂಡಿಸಲು ಸರ್ಕಾರ ಉದ್ದೇಶಿಸಿದೆ.
ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ರಷ್ಯಾ–ಉಕ್ರೇನ್ ಯುದ್ಧದಲ್ಲಿ ಭಾರತ ತೆಗೆದುಕೊಂಡ ನಿಲುವಿನ ಬಗ್ಗೆ ಸದನಕ್ಕೆ ಮಾಹಿತಿ ನೀಡುವ ಸಾಧ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.