ADVERTISEMENT

ಗುಜರಾತ್‌ | 6 ಅಂತಸ್ತಿನ ಕಟ್ಟಡ ಕುಸಿತ: 15 ಮಂದಿಗೆ ಗಾಯ, ಹಲವರು ಸಿಲುಕಿರುವ ಶಂಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜುಲೈ 2024, 13:08 IST
Last Updated 6 ಜುಲೈ 2024, 13:08 IST
<div class="paragraphs"><p>ಪೊಲೀಸರು ಹಾಗೂ&nbsp;ಅಗ್ನಿಶಾಮಕ ದಳದ ಅಧಿಕಾರಿಗಳಿಂದ&nbsp;ರಕ್ಷಣಾ ಕಾರ್ಯಾಚರಣೆ</p></div>

ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳಿಂದ ರಕ್ಷಣಾ ಕಾರ್ಯಾಚರಣೆ

   

(ಚಿತ್ರ ಕೃಪೆ–X/@PTI)

ಅಹಮದಾಬಾದ್‌ (ಗುಜರಾತ್‌): ಸೂರತ್‌ನ ಸಚಿನ್ ಪಾಲಿ ಗ್ರಾಮದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಇಂದು(ಶನಿವಾರ) ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.