ನವದೆಹಲಿ: ಬುಲಂದ್‌ಶಹರ್ ಹಿಂಸಾಚಾರ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಉತ್ತರಪ್ರದೇಶ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ.
ಬುಲಂದ್‌ಶಹರ್‌ನಲ್ಲಿ ನಡೆದ ಗುಂಪು ದಾಳಿಯ ವೇಳೆ ಪೊಲೀಸರು ಹತ್ಯೆಯಾಗಿ 25 ದಿನಗಳು ಕಳೆದಿವೆ. ಆದರೆ, ಈವರೆಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಗುಂಪು ಹಲ್ಲೆಗಳು ಹೆಚ್ಚಾಗಿವೆ. ಬುಲಂದ್‌ಶಹರ್ ಪ್ರಕರಣದಲ್ಲಿ ಮೊದಲು ಯಾರೋ ಆರೋಪಿಗಳಾಗಿದ್ದರು, ಆದರೆ ಈಗ ಯಾರೋ ಅಪರಾಧಿಗಳಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾದವರು ಬಿಜೆಪಿ ನಾಯಕರು ಎಂಬ ಮಾಹಿತಿ ಇದೆ. ಈ ನಿಟ್ಟಿನಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.