ಬಾಲೇಶ್ವರ (ಒಡಿಶಾ): ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮತ್ತು ಒಡಿಶಾದ ಪೊಲೀಸರ ತಂಡಗಳು ನಡೆಸಿದ ದಾಳಿಯಲ್ಲಿ ಬಾಲೇಶ್ವರ ಜಿಲ್ಲೆಯ ಹಳ್ಳಿಯೊಂದರಲ್ಲಿ ಹಸುವಿನ ಸಗಣಿಯ ರಾಶಿಯಿಂದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೈದರಾಬಾದ್‌ನ ಕೃಷಿ ಆಧಾರಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಗೋಪಾಲ್ ಬೆಹೆರಾ ಎಂಬ ವ್ಯಕ್ತಿ ಕಂಪನಿಯ ಲಾಕರ್‌ನಿಂದ ₹20 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿದ್ದಾನೆ. ತನ್ನ ಭಾವ ರವೀಂದ್ರ ಬೆಹೆರಾ ಮೂಲಕ ಹಣವನ್ನು ಗ್ರಾಮಕ್ಕೆ ಕಳುಹಿಸಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.
ದೂರಿನ ಮೇರೆಗೆ ಕಮರ್ದಾ ಪೊಲೀಸರೊಂದಿಗೆ ಕಾರ್ಯಾಚರಣೆ ಪ್ರಾರಂಭಿಸಿದ ಹೈದರಾಬಾದ್ ಪೊಲೀಸರು ಗೋಪಾಲ್ ಬೆಹೆರಾ ಅವರ ಮನೆಯ ಮೇಲೆ ದಾಳಿ ನಡೆಸಿ ಹಸುವಿನ ಸಗಣಿಯ ರಾಶಿಯಲ್ಲಿ ಬಚ್ಚಿಟ್ಟಿದ್ದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೋಪಾಲ್ ಮತ್ತು ಆತನ ಭಾವ ರವೀಂದ್ರ ಇಬ್ಬರೂ ತಲೆಮರೆಸಿಕೊಂಡಿದ್ದಾರೆ. ದಾಳಿ ವೇಳೆ ಆತನ ಕುಟುಂಬದ ಸದಸ್ಯರೊಬ್ಬರನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕಮರ್ದಾ ಪೊಲೀಸ್ ಠಾಣೆ ಐಐಸಿ ಪ್ರೇಮದ ನಾಯಕ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.