ನವದೆಹಲಿ: ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ ಅವರು ಭಾರತದ ಚೆಸ್ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರನ್ನು ಶುಕ್ರವಾರ ಭೇಟಿಯಾಗಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತ ಏನನ್ನು ಸಾಧಿಸಬಹುದು ಎನ್ನುವುದನ್ನು ಪ್ರಜ್ಞಾನಂದ ಅವರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
‘ಪ್ರಜ್ಞಾನಂದ ಅವರು ಚೆಸ್ ಜಗತ್ತಿನಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದು ಭಾರತವೇ ಹೆಮ್ಮೆಪಡುವಂತೆ ಮಾಡುತ್ತಿರುವಾಗ ಅವರನ್ನು ಪ್ರೋತ್ಸಾಹಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಅವರ ಯಶಸ್ಸು ಅಸಂಖ್ಯಾತ ಯುವ ಭಾರತೀಯರಿಗೆ ಸ್ಪೂರ್ತಿಯಾಗಿದೆ. ನಮ್ಮ ರಾಷ್ಟ್ರದ ಹಿರಿಮೆಯನ್ನು ಹೆಚ್ಚಿಸಿದ ವ್ಯಕ್ತಿಯ ಕುರಿತು ಮಾತನಾಡುವುದಕ್ಕಿಂತ ಸಂತಸದ ವಿಷಯ ಇನ್ನೊಂದಿಲ್ಲ. ನಾನು ಅವರಿಗೆ ಶುಭ ಹಾರೈಸುತ್ತೇನೆ. ಜೈ ಹಿಂದ್’ ಎಂದು ಬರೆದುಕೊಂಡಿದ್ದಾರೆ.
2023ರ ಆಗಸ್ಟ್ 24 ರಂದು ಅಜರ್‌ಬೈಜಾನ್‌ನ ಬಾಕುದಲ್ಲಿ ನಡೆದಿದ್ದ ಅಂತರರಾಷ್ಟ್ರೀಯ ಚೆಸ್ ಫೆಡರೇಶನ್ ವಿಶ್ವಕಪ್ ಪಂದ್ಯದಲ್ಲಿ ವಿಶ್ವದ ನಂಬರ್ 1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಎದುರು ಪರಾಭವಗೊಂಡರೂ ಎರಡನೇ ಸ್ಥಾನ ಪಡೆಯುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.