ಪುಣೆ: ಕೊಲ್ಹಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತರು ಅನುಮತಿಯಿಲ್ಲದೆ ಛತ್ರಪತಿ ಶಿವಾಜಿ ಅವರ ಪ್ರತಿಮೆ ಸ್ಥಾಪಿಸಿದ್ದು, ಬಳಿಕ ತೆರವುಗೊಳಿಸಲಾಯಿತು ಎಂದು ಪೊಲೀಸರು ಸೋಮವಾರ ತಿಳಿಸಿದರು.
ಶಾಹುವಾಡಿಯ ಬಂಬವಾಡೆ ಗ್ರಾಮದಲ್ಲಿ ಪ್ರತಿಮೆ ಸ್ಥಾಪಿಸಲಾಗಿತ್ತು. ತೆರವುಗೊಳಿಸಲು ಸ್ಥಳೀಯರು ವಿರೋಧಿಸಿದರಾದರೂ, ಅವರ ಮನವೊಲಿಸಿ ತೆರವುಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಾಲಚಂದ್ರ ದೇಶ್‌ಮುಖ್ ಅವರು ಹೇಳಿದರು.
ಈ ಸಂಬಂಧ ಪ್ರಕರಣವನ್ನು ಕೂಡ ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.