ADVERTISEMENT

ಬಿಹಾರ: ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 13:52 IST
Last Updated 14 ಜುಲೈ 2024, 13:52 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಪಟ್ನಾ: ಇತ್ತೀಚೆಗೆ ನಡೆದ ಉಪಚುನಾವಣೆ ಪರಿಣಾಮವಾಗಿ ಬಿಹಾರದಲ್ಲಿ ಬಿಜೆಪಿಯು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 

ರೂಪೌಲಿ ಕ್ಷೇತ್ರದಲ್ಲಿ ಆರ್‌ಜೆಡಿ ಅಭ್ಯರ್ಥಿ ಭೀಮಾ ಭಾರತಿ ಅವರು ಪರಾಭವಗೊಂಡ ಕಾರಣ ಹಾಗೂ ಜೆಡಿಯು ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿ ಶಂಕರ್‌ ಸಿಂಗ್‌ ಜಯಭೇರಿ ಬಾರಿಸಿದ ಪರಿಣಾಮವಾಗಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ADVERTISEMENT

ಸದ್ಯ, ಬಿಹಾರ ವಿಧಾನಸಭೆಯ ಒಟ್ಟು 243 ಸ್ಥಾನಗಳ ಪೈಕಿ ಬಿಜೆಪಿಯು 78 ಕ್ಷೇತ್ರಗಳಲ್ಲಿ, ಆರ್‌ಜೆಡಿ 77ರಲ್ಲಿ ಗೆದ್ದಿವೆ. 

ರಾಜ್ಯದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೂ ಸ್ವಾತಂತ್ರ್ಯಾ ನಂತರದಿಂದ ಈವರೆಗೂ ಪಕ್ಷದ ಅಭ್ಯರ್ಥಿಯೊಬ್ಬರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ.

ಪ್ರಸ್ತುತ, ಜೆಡಿಯು ನೆರವಿನಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಇಲ್ಲಿ ಆಡಳಿತ ನಡೆಸುತ್ತಿದೆ. ಜೆಡಿಯುಗಿಂತ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದ್ದರೂ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿದ್ದಾರೆ.

ಸರಳ ಬಹುಮತ ಪಡೆದಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಿತೀಶ್‌ ಕುಮಾರ್‌ ಅವರ ಬೆಂಬಲ ಅಗತ್ಯವಾಗಿರುವ ಕಾರಣ, 2025ರ ವಿಧಾನಸಭೆ ಚುನಾವಣೆಯನ್ನು ನಿತೀಶ್‌ ಕುಮಾರ್‌ ನಾಯಕತ್ವದಲ್ಲಿ ಎದುರಿಸುವುದಾಗಿ ಬಿಜೆಪಿ ಈಗಾಗಲೇ ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.