ADVERTISEMENT

ಉಪ ಚುನಾವಣೆ: ಉತ್ತರ ಪ್ರದೇಶ, ಪಂಜಾಬ್‌ನಲ್ಲಿ ಮತದಾನದ ವೇಳೆ ಘರ್ಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ನವೆಂಬರ್ 2024, 6:55 IST
Last Updated 20 ನವೆಂಬರ್ 2024, 6:55 IST
<div class="paragraphs"><p>ಉತ್ತರ ಪ್ರದೇಶದದ ಮುಜಾಫರ್‌ನಗರ ಜಿಲ್ಲೆಯ ಮೀರಾಪುರ ಕ್ಷೇತ್ರದಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ</p></div>

ಉತ್ತರ ಪ್ರದೇಶದದ ಮುಜಾಫರ್‌ನಗರ ಜಿಲ್ಲೆಯ ಮೀರಾಪುರ ಕ್ಷೇತ್ರದಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ

   

ಪಿಟಿಐ ಚಿತ್ರ

ನವದೆಹಲಿ: ಉಪ ಚುನಾವಣೆ ನಡೆಯುತ್ತಿರುವ ಪಂಜಾಬ್‌ ಹಾಗೂ ಉತ್ತರ ಪ್ರದೇಶದಲ್ಲಿ ಮತದಾನದ ದಿನವೇ ಗುಂಪುಗಳ ನಡುವೆ ಘರ್ಷಣೆಯಾಗಿದೆ.

ADVERTISEMENT

ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್‌ ಕ್ಷೇತ್ರದ ಡೇರಾ ಪಠಾಣ ಗ್ರಾಮದಲ್ಲಿ ಕಾಂಗ್ರೆಸ್‌ ಹಾಗೂ ಎಎಪಿ ಕಾರ್ಯಕರ್ತರು ನಡುವೆ ಗಲಾಟೆಯಾಗಿದೆ.

ಘಟನೆ ವೇಳೆ ಸ್ಥಳದಲ್ಲಿದ್ದ ಕಾಂಗ್ರೆಸ್‌ ಸಂಸದ ಸುಖ್‌ಜಿಂದರ್‌ ಸಿಂಗ್‌ ರಾಂಧವ ಅವರು, ಗೂಂಡಾಗಳು ಸಮಸ್ಯೆ ಸೃಷ್ಟಿಸಲು ಯತ್ನಿಸಿದರು. ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದದ ಮುಜಾಫರ್‌ನಗರ ಜಿಲ್ಲೆಯ ಮೀರಾಪುರ ಕ್ಷೇತ್ರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದೆ.

ಕಾಕರೊಲಿ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಮತದಾನ ಮುಂದುವರಿದಿದೆ ಎಂದು ಮಜಾಫರ್‌ನಗರ ಎಸ್‌ಎಸ್‌ಪಿ ಅಭಿಷೇಕ್‌ ಸಿಂಗ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.