ಜಲ್‌ಪಾಯಿಗುರಿ, (ಪಶ್ಚಿಮ ಬಂಗಾಳ): ಅಸ್ಸಾಂನಲ್ಲಿ ಇರುವ ಹಾಗೆ ಪಶ್ಚಿಮ ಬಂಗಾಳದಲ್ಲೂ ನಿರಾಶ್ರಿತರ ಶಿಬಿರ ಸ್ಥಾಪಿಸುವುದಕ್ಕೆ ನಾನು ಬಿಡುವುದಿಲ್ಲ. ಸಿಎಎ, ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯ ರಾಜಕೀಯ ಗಿಮಿಕ್ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಗೆ (ಎನ್‌ಆರ್‌ಸಿ) ಸಂಬಂಧ ಇದೆ. ಹೀಗಾಗಿ ಅದನ್ನು ನಾನು ವಿರೋಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಟೀಕಿಸಿದ ತಮ್ಮ ಸಹೋದರ ಬಬುನ್ ಬ್ಯಾನರ್ಜಿ ವಿರುದ್ದವೂ ವಾಗ್ದಾಳಿ ನಡೆಸಿದ ಮಮತಾ, ಅವರ ಜೊತೆ ಇರುವ ಎಲ್ಲಾ ಸಂಬಂಧಗಳನ್ನು ತ್ಯಜಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
‘ನಾನು ಹಾಗೂ ನನ್ನ ಕುಟುಂಬ ಅವನ ಜೊತೆ ಇರುವ ಎಲ್ಲಾ ಸಂಬಂಧವನ್ನು ತ್ಯಜಿಸಲು ನಿರ್ಧರಿಸಿದ್ದೇವೆ. ದುರಾಸೆ ಇರುವ ಜನರು ನನಗೆ ಇಷ್ಟವಾಗುವುದಿಲ್ಲ. ಅವನು ಹೇಳಿದ್ದನ್ನು ನಾನು ಕೇಳಿಸಿಕೊಂಡಿದ್ದೇನೆ. ಅವನು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದು, ಏನೂ ಬೇಕಾದರೂ ಮಾಡಲಿ. ನನಗೂ ಅವನಿಗೂ ಸಂಬಂಧ ಕಲ್ಪಿಸಬೇಡಿ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.